ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಹೇಮಾವತಿ ನದಿಯಲ್ಲಿ ಪತ್ತೆ
ಮೂಡಿಗೆರೆ: ಪಟ್ಟಣದ ದೊಡ್ಡಿಬೀದಿಯಿಂದ ನಾಪತ್ತೆಯಾಗಿದ್ದ ವ್ಯಕ್ತಿಯೊಬ್ಬರ ಶವ ಗೋಣಿಬೀಡು ಠಾಣಾ ವ್ಯಾಪ್ತಿಯ ಅಣಜೂರು ಬಳಿ ಹೇಮಾವತಿ ನದಿಯಲ್ಲಿ ಪತ್ತೆಯಾಗಿದೆ.
ಮೂಡಿಗೆರೆಯ ಡೊಡ್ಡಬೀದಿ ನಿವಾಸಿ 40 ವರ್ಷದ ಲಕ್ಷ್ಮಣ್ ಎಂಬವರು ಮನೆಯಿಂದ ನಾಪತ್ತೆಯಾಗಿದ್ದರು. ಅವರಿಗಾಗಿ ಕುಟುಂಬದವರು ಹುಡುಕಾಟ ನಡೆಸಿದ್ದರು. ಆದರೆ ಶುಕ್ರವಾರ ಸಂಜೆ ಅಣಜೂರು ಸಮೀಪ ಹೇಮಾವತಿ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿತ್ತು.
ವಿಷಯ ತಿಳಿದು ಸ್ಥಳಕ್ಕೆ ಗೋಣಿಬೀಡು ಪೊಲೀಸರು ಭೇಟಿ ನೀಡಿ ಸಮಾಜ ಸೇವಕ ಆರೀಫ್ ಬಣಕಲ್ ಅವರ ಸಹಕಾರದಿಂದ ಶವವನ್ನು ಮೇಲಕ್ಕೆತ್ತಿದ್ದರು. ನಂತರ ಪರಿಶೀಲನೆ ನಡೆಸಲಾಗಿ ಇದು ಮೂಡಿಗೆರೆಯಿಂದ ನಾಪತ್ತೆಯಾಗಿದ್ದ ಲಕ್ಷ್ಮಣ್ ಅವರ ಶವವೆಂದು ತಿಳಿದುಬಂದಿದೆ. ಈ ಬಗ್ಗೆ ಲಕ್ಷ್ಮಣ್ ಸಹೋದರ ಸಹೋದರ ಗೋಣಿಬೀಡು ಠಾಣೆಗೆ ದೂರು ನೀಡಿದ್ದರು. ಶವವನ್ನು ಮೂಡಿಗೆರೆ ಎಂಜಿಎಂ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಶವವನ್ನು ಕುಟುಂಬದವರಿಗೆ ಹಸ್ತಾಂತರಿಸಲಾಗಿದೆ.
ಮೂಡಿಗೆರೆ ಪಟ್ಟಣದ ದೊಡ್ಡಿಬೀದಿ ನಿವಾಸಿಯಾಗಿದ್ದ ಲಕ್ಷ್ಮಣ್ ಅವಿವಾಹಿತರಾಗಿದ್ದು, ಪೈಂಟಿಂಗ್ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಮೇಲ್ನೋಟಕ್ಕೆ ಇದು ಆತ್ಮಹತ್ಯೆ ಎಂದು ತಿಳಿದುಬಂದಿದೆ. ಗೋಣೀಬೀಡು ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: