ಉಡುಪಿ: ಕಲ್ಸಂಕದ ನಿರ್ಮಾಣ ಹಂತದ ಕಟ್ಟಡದಲ್ಲಿ ಮೃತದೇಹ ಪತ್ತೆ - Mahanayaka
1:32 PM Thursday 12 - December 2024

ಉಡುಪಿ: ಕಲ್ಸಂಕದ ನಿರ್ಮಾಣ ಹಂತದ ಕಟ್ಟಡದಲ್ಲಿ ಮೃತದೇಹ ಪತ್ತೆ

death1
01/04/2023

ಉಡುಪಿ: ನಗರದ ಕಲ್ಸಂಕದ ಶ್ರೀಕೃಷ್ಣ ಮಠ ಪಾರ್ಕಿಂಗ್ ಸ್ಥಳಕ್ಕೆ ಹೋಗುವ ಮಾರ್ಗದಲ್ಲಿ ಸಿಗುವ ಕಾಮಗಾರಿ ಸ್ಥಗಿತಗೊಂಡಿರುವ ಕನಕ ಮಹಲ್ ಕಟ್ಟಡದಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮೃತದೇಹವು ಇಂದು ಪತ್ತೆಯಾಗಿದೆ.

ಘಟನಾ ಸ್ಥಳಕ್ಕೆ ಆಗಮಿಸಿದ ಉಡುಪಿ ನಗರ ಠಾಣಾ ಪೊಲೀಸರು ಕಾನೂನು ಪ್ರಕ್ರಿಯೆ ನಡೆಸಿದ್ದಾರೆ. ಸಮಾಜಸೇವಕ ನಿತ್ಯಾನಂದ ಒಳಕಾಡು, ಸುನೀಲ್ ಬೈಲಕೆರೆ ಮೃತದೇಹವನ್ನು ಶವಗಾರಕ್ಕೆ ಸಾಗಿಸಲು ಸಹಕರಿಸಿದರು. ಮೃತದೇಹವನ್ನು ಅಜ್ಜರಕಾಡು ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ. ವಾರಸುದಾರರು ನಗರ ಪೋಲಿಸ್ ಠಾಣೆಯನ್ನು ಸಂಪರ್ಕಿಸಲು ಸೂಚಿಸಲಾಗಿದೆ.

ಪಾಳುಬಿದ್ದಿರುವ ಕನಕ ಮಹಲ್ ಬಹುಮಹಡಿ ಕಟ್ಟಡದಲ್ಲಿ ಪತ್ತೆಯಾಗಿರುವ ಶವಗಳ ಸಂಖ್ಯೆ ಆರಕ್ಕೆ ಏರಿದೆ. ವಾರದ ಹಿಂದೆ ಇದೇ ಕಟ್ಟಡದಲ್ಲಿ ಶವವೊಂದು ಪತ್ತೆಯಾಗಿತ್ತು. ಕಟ್ಟಡಕ್ಕೆ ಸಂಬಂಧಪಟ್ಟವರು ಅಪರಿಚಿತರು ಒಳ ನುಸುಳದಂತೆ ಕಾವಲುಗಾರ ನೇಮಿಸುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಯೂಟ್ಯೂಬ್ ಚಾನೆಲ್ ಸಬ್ಸ್ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

 

ಇತ್ತೀಚಿನ ಸುದ್ದಿ