ಡೆಡ್ಲಿ ಇಡ್ಲಿ: ಬೆಂಗಳೂರಿನಲ್ಲಿ ಇಡ್ಲಿ ಖರೀದಿಸಲು ಹಿಂದೇಟು ಹಾಕುತ್ತಿರುವ ಸಾರ್ವಜನಿಕರು!

Deadly Idli–ಬೆಂಗಳೂರು: ಇಡ್ಲಿ ತಯಾರಿಕೆಯಲ್ಲಿ ಹತ್ತಿ ಬಟ್ಟೆಯ ಬದಲು ಪ್ಲಾಸ್ಟಿಕ್ ಕವರ್‌ಗಳನ್ನು ಬಳಸಲಾಗುತ್ತಿದ್ದು, ಇದರಿಂದ ಕ್ಯಾನ್ಸರ್ ಬರುವ ಅಪಾಯ ಹೆಚ್ಚು ಎಂಬ ವರದಿಗಳ ಹಿನ್ನೆಲೆ ಸಾರ್ವಜನಿಕರು ಎಚ್ಚೆತ್ತುಕೊಂಡಿದ್ದಾರೆ.
ಮಲ್ಲೇಶ್ವರಂ, ಆರ್‌ಟಿ ನಗರ ಮತ್ತು ಜಯನಗರದಂತಹ ಪ್ರಮುಖ ಪ್ರದೇಶಗಳಲ್ಲಿರುವ ಹೊಟೇಲ್ ಗಳಲ್ಲಿ ಇಡ್ಲಿ ಮಾರಾಟದಲ್ಲಿ ಕುಸಿತ ಕಂಡಿದೆ. ಗ್ರಾಹಕರ ಸಂಖ್ಯೆ ಕಡಿಮೆಯಾಗದಿದ್ದರೂ, ಇಡ್ಲಿ ಕೊಂಡುಕೊಳ್ಳುವವರ ಸಂಖ್ಯೆಯಲ್ಲಿ ತೀವ್ರ ಇಳಿಕೆಯಾಗಿದೆ ಎಂದು ಹೇಳಲಾಗಿದೆ.
ಇನ್ನೂ ಇಡ್ಲಿ ತಯಾರಿಕೆ ವೇಳೆ ಪ್ಲಾಸ್ಟಿಕ್ ಬಳಕೆ ಮಾಡ್ತಿದ್ದೀರಾ ಎಂದು ಹೊಟೇಲ್ ಸಿಬ್ಬಂದಿಗಳನ್ನ ಗ್ರಾಹಕರು ಪ್ರಶ್ನೆ ಮಾಡುತ್ತಿದ್ದಾರೆ ಎಂದು ಹೊಟೇಲ್ ಸಿಬ್ಬಂದಿ ತಿಳಿಸಿದ್ದಾರೆ.
ಇಡ್ಲಿ ತಯಾರಿಗೆ ವೇಳೆ ಸ್ಟೇನ್‌ಲೆಸ್ ಸ್ಟೀಲ್ ಮತ್ತು ಮಸ್ಲಿನ್ ಬಟ್ಟೆಯನ್ನು ಮಾತ್ರ ಬಳಕೆ ಮಾಡಲಾಗುತ್ತಿದ್ದು, ನೈರ್ಮಲ್ಯ ಮಾನದಂಡಗಳನ್ನು ಕಾಯ್ದುಕೊಳ್ಳಲಾಗುತ್ತಿದೆ ಎಂದು ರೆಸ್ಟೋರೆಂಟ್ ಗಳ ಮಾಲೀಕರು ಹೇಳಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BR3b3qhWZWaCzpD1m6N5uu