ಬಾಣಂತಿಯರ ಮರಣ: ಆಸ್ಪತ್ರೆಯಲ್ಲಿ ಸಾವು ಇದ್ದಿದ್ದೆ, ಅದನ್ನು ರಾಜಕೀಯ ಮಾಡಬಾರದು: ದಿನೇಶ್ ಗುಂಡೂರಾವ್
ಬೆಳಗಾವಿ: ಬಾಣಂತಿಯರ ಮರಣಗಳು ಆಗುತ್ತಿವೆ, ಪ್ರತಿ ವರ್ಷ ಆಸ್ಪತ್ರೆಗಳಲ್ಲಿ ಸಾವಿನ ಸಂಖ್ಯೆ ಇದ್ದೇ ಇರುತ್ತದೆ ಅದನ್ನು ರಾಜಕೀಯ ಮಾಡಬಾರದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್(Dinesh Gundu Rao) ಪ್ರತಿಪಕ್ಷಗಳ ಆರೋಪಗಳಿಗೆ ಉತ್ತರಿಸಿದ್ದಾರೆ.
ಬೆಳಗಾವಿ ಚಳಿಗಾಲದ ಅಧಿವೇಶದಲ್ಲಿ ಭಾಗಿಯಾಗುವುದಕ್ಕೂ ಮುನ್ನ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಬಾಣಂತಿಯರ ಸಾವಿನ ವಿಚಾರವಾಗಿ ಅಧಿವೇಶನದಲ್ಲಿ ಗಂಭೀರ ಚರ್ಚೆಗಳಾಗಬೇಕು, ಅದಕ್ಕೆ ನಾವು ಉತ್ತರಿಸುತ್ತೇವೆ ಎಂದು ಹೇಳಿದರು.
ವ್ಯವಸ್ಥೆ ಸರಿಪಡಿಸುವ ಕೆಲಸ ಆಗುತ್ತಿದೆ ಎಂದ ಅವರು, ಸರ್ಕಾರ ಮೆಡಿಕಲ್ ಮಾಫಿಯಾ ಹಿಡಿತಕ್ಕೆ ಸಿಲುಕಿದೆಯಾ ಎನ್ನುವ ಪ್ರಶ್ನೆಗೆ, ಈ ವಿಚಾರವಾಗಿ ನಾನು ಸದನದಲ್ಲಿ ಚರ್ಚೆ ಮಾಡುತ್ತೇನೆ ಎಂದರು.
ಆರೋಗ್ಯ ಇಲಾಖೆ ಬಗ್ಗೆ ಮಾತನಾಡಬೇಕು, ಬಳ್ಳಾರಿ ಆಸ್ಪತ್ರೆಯಲ್ಲಿ ಬಾಣಂತಿಯರ ಮರಣ ವಿಚಾರದ ಬಗ್ಗೆ ನಮಗೆ ಚಿಂತೆ ಇದೆ, ಸರ್ಕಾರ ಎಚ್ಚೆತ್ತುಕೊಂಡಿದೆ ಎಂದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: