ಸ್ಕೂಟರ್ ಸ್ಕಿಡ್ ಆಗಿ ಟ್ಯಾಂಕರ್ ನಡಿಗೆ ಸಿಲುಕಿದ ದಂಪತಿ ಸ್ಥಳದಲ್ಲೇ ಸಾವು!
ಪಡುಬಿದ್ರಿ: ಟ್ಯಾಂಕರ್ ಹಾಗೂ ಸ್ಕೂಟರ್ ನಡುವೆ ನಡೆದ ಭೀಕರ ಅಪಘಾತದಲ್ಲಿ ದಂಪತಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಪಡುಬಿದ್ರಿ ಠಾಣಾ ವ್ಯಾಪ್ತಿಯ ಮುಲ್ಕಿ ಸೇತುವೆ ಬಳಿಯಲ್ಲಿ ನಡೆದಿದೆ.
ಮೃತಪಟ್ಟ ದಂಪತಿಯನ್ನು ತೀರ್ಥಹಳ್ಳಿ ಕೋಳಿಕಾಲು ಗುಡ್ಡೆ ನಿವಾಸಿ ಅಕ್ಬರ್ ಪಾಶಾ(61 ವರ್ಷ) ಹಾಗೂ ಅವರ ಪತ್ನಿ ಖತೀಜಾಬಿ(46 ವರ್ಷ) ಎಂದು ಗುರುತಿಸಲಾಗಿದೆ.
ದಂಪತಿ ಪ್ರಯಾಣಿಸುತ್ತಿದ್ದ ಆ್ಯಕ್ಟೀವಾ ರಸ್ತೆಯಲ್ಲಿ ಸ್ಕಿಡ್ ಆಗಿದ್ದು, ಈ ವೇಳೆ ಅದೇ ಮಾರ್ಗದಲ್ಲಿ ಬರುತ್ತಿದ್ದ ಟ್ಯಾಂಕರ್ ದಂಪತಿಯ ತಲೆಯ ಮೇಲೆ ಹರಿದಿದ್ದು, ಪರಿಣಾಮವಾಗಿ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ರಾಷ್ಟ್ರೀಯ ಹೆದ್ದಾರಿ 66ರ ಬಪ್ಪನಾಡು ಮುಲ್ಕಿ ಸೇತುವೆಯಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಘಟನಾ ಸ್ಥಳಕ್ಕೆ ಭೇಟಿ ನೀಡಿರುವ ಪೊಲೀಸರು ಪರಿಶೀಲನೆ ನಡೆಸಿದ್ದು, ಕಾನೂನು ಕ್ರಮಕೈಗೊಂಡಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw