ಬೆಂಗಳೂರಿನಲ್ಲಿ ಡೆಂಗ್ಯೂ ಜ್ವರಕ್ಕೆ ಮೊದಲ ಬಲಿ: 11 ವರ್ಷದ ಬಾಲಕ ಸಾವು
06/07/2024
ಬೆಂಗಳೂರು: ರಾಜ್ಯಾದ್ಯಂತ ಡೆಂಗ್ಯೂ ಜ್ವರ ಆತಂಕ ಸೃಷ್ಟಿ ಮಾಡಿದ್ದು, ಮಾರಕಸೋಂಕು ಇದೀಗ ಬೆಂಗಳೂರಿನಲ್ಲಿ ಮೊದಲ ಬಲಿ ಪಡೆದಿಕೊಂಡಿದೆ.
ಸಿಲಿಕಾನ್ ಸಿಟಿಯಲ್ಲಿ 11 ವರ್ಷ ವಯಸ್ಸಿನ ಬಾಲಕನೊಬ್ಬ ಬಲಿಯಾಗಿದ್ದಾನೆ. ಅಂಜನಾಪುರದ ಗಗನ್ ಮೃತಪಟ್ಟ ಬಾಲಕ ಎಂದು ಗುರುತಿಸಲಾಗಿದೆ.
ಜಂಬೂಸವಾರಿ ದಿಣ್ಣೆಯ ಚೈತನ್ಯ ಟೆಕ್ನೋ ಶಾಲೆಯಲ್ಲಿ ಓದುತ್ತಿದ್ದ ಗಗನ್ ಕೆಲ ದಿನಗಳಿಂದ ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ. ಈ ಹಿನ್ನೆಲೆಯಲ್ಲಿ ಪೋಷಕರು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದ್ದರು. ಆದರೆ ಚಿಕಿತ್ಸೆ ಫಲಿಸದೇ ನಿನ್ನೆ ತಡರಾತ್ರಿ ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದಿದ್ದಾನೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/JItjEWZ9e5fBWDL6CkTr97