ಗ್ಯಾಸ್ ಸಿಲಿಂಡರ್ ಸ್ಫೋಟ ಪ್ರಕರಣ: ಸಾವನ್ನಪ್ಪಿದವರ ಸಂಖ್ಯೆ 3ಕ್ಕೆ ಏರಿಕೆ - Mahanayaka

ಗ್ಯಾಸ್ ಸಿಲಿಂಡರ್ ಸ್ಫೋಟ ಪ್ರಕರಣ: ಸಾವನ್ನಪ್ಪಿದವರ ಸಂಖ್ಯೆ 3ಕ್ಕೆ ಏರಿಕೆ

hubballi
27/12/2024

ಹುಬ್ಬಳ್ಳಿ: ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಗಂಭೀರವಾಗಿ ಗಾಯಗೊಂಡಿರುವ 9 ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳ ಪೈಕಿ ಇಬ್ಬರು ಈಗಾಗಲೇ ಮೃತಪಟ್ಟಿದ್ದು, ಇದೀಗ ಮತ್ತೋರ್ವ ಅಯ್ಯಪ್ಪ ಮಾಲಾಧಾರಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಈ ಮೂಲಕ ಈ ಘಟನೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ 3ಕ್ಕೆ ಏರಿಕೆಯಾಗಿದೆ.

ಉಣಕಲ್ ಹತ್ತಿರದ ಸಾಯಿ ನಗರದಲ್ಲಿ ಸೋಮವಾರ ಬೆಳಗಿನ ಜಾವ ಸಿಲಿಂಡರ್ ಸ್ಫೋಟಗೊಂಡು 9 ಮಂದಿ ಅಯ್ಯಪ್ಪಸ್ವಾಮಿ ಮಾಲಾಧಾರಿಗಳು ಗಾಯಗೊಂಡಿದ್ದರು. ರಾತ್ರಿ ವೇಳೆ ಗ್ಯಾಸ್ ಸೋರಿಕೆಯಾಗಿದ್ದು, ಅಯ್ಯಪ್ಪ ಸ್ವಾಮಿಗೆ ಹಚ್ಚಿಟ್ಟಿದ್ದ ದೀಪ 9 ಅಯ್ಯಪ್ಪ ಮಾಲಾಧಾರಿಗಳ ಪ್ರಾಣಕ್ಕೆ ಸಂಚಕಾರ ಉಂಟು ಮಾಡಿದೆ. ಗ್ಯಾಸ್ ಸೋರಿಕೆಯಾದ ವೇಳೆ ಅಯ್ಯಪ್ಪ ಸ್ವಾಮಿಗೆ ಹಚ್ಚಿಟ್ಟಿದ್ದ ದೀಪದಿಂದ ಬೆಂಕಿ ಹತ್ತಿಕೊಂಡಿದೆ ಎನ್ನಲಾಗಿದೆ.

ಇಂದು ಸಾವನ್ನಪ್ಪಿದ ಅಯ್ಯಪ್ಪ ಮಾಲಾಧಾರಿಯನ್ನು ರಾಜು ಮೂಗೇರಿ(21) ಎಂದು ಗುರುತಿಸಲಾಗಿದೆ. ಉಳಿದ 6 ಮಂದಿ ಗಾಯಾಳುಗಳಿಗೆ ಚಿಕಿತ್ಸೆ ಮುಂದುವರಿಸಲಾಗಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/HEkqDgrW2BlJLad5kZ1DX7

ಇತ್ತೀಚಿನ ಸುದ್ದಿ