ಮತಾಂತರ ನಿಷೇಧ ಕಾಯಿದೆ ರದ್ದಿಗೆ ತೀರ್ಮಾನ - Mahanayaka
2:20 PM Thursday 12 - December 2024

ಮತಾಂತರ ನಿಷೇಧ ಕಾಯಿದೆ ರದ್ದಿಗೆ ತೀರ್ಮಾನ

h k patil
15/06/2023

ಬೆಂಗಳೂರು: ಕಳೆದ ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ ಮತಾಂತರ ನಿಷೇಧ ಕಾಯ್ದೆ ರದ್ದಿಗೆ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಕಾನೂನು ಸಚಿವ ಹೆಚ್.ಕೆ.ಪಾಟೀಲ್ ಹೇಳಿದ್ದಾರೆ‌.

2022 ರಲ್ಲಿ ಬಿಜೆಪಿ ಸರ್ಕಾರ ಮಾಡಿದ್ದ ತಿದ್ದುಪಡಿಯನ್ನು ರದ್ದು ಮಾಡುವ ನಿರ್ಣಯವನ್ನು ಸಂಪುಟ ಸಭೆಯಲ್ಲಿ ತೆಗೆದುಕೊಂಡಿದ್ದೇವೆ. ಜುಲೈ ಅಧಿವೇಶನದಲ್ಲಿ ಹೊಸ ತಿದ್ದುಪಡಿಯೊಂದಿಗೆ ಮರು ಮಂಡನೆಗೆ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಹೇಳಿದರು.

ರಾಜ್ಯದಲ್ಲಿ ಮತಾಂತರ ತಡೆಯುವ ಉದ್ದೇಶದಿಂದ ಬಿಜೆಪಿ ನೇತೃತ್ವದ ಸರ್ಕಾರ ಕಾಯ್ದೆಯೊಂದನ್ನು ಜಾರಿಗೆ ತಂದಿತ್ತು. 2021ರ ಡಿಸೆಂಬರ್‌ ನಲ್ಲಿ ಬೆಳಗಾವಿಯಲ್ಲಿ ನಡೆದ ವಿಧಾನಮಂಡಲ ಅಧಿವೇಶನದಲ್ಲಿ ಮತಾಂತರ ನಿಷೇಧ ಮಸೂದೆಯನ್ನು ಅಂಗೀಕರಿಸಲಾಗಿತ್ತು. ನಂತರ ಸುಗ್ರೀವಾಜ್ಞೆ ಮೂಲಕ ಕಾಯ್ದೆಯನ್ನು ಜಾರಿಗೊಳಿಸಿತ್ತು.

ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯದ ಹಕ್ಕು ಧಾರ್ಮಿಕ ಸಂರಕ್ಷಣಾ ಅಧಿನಿಯಮ- 2022 ನ್ನು ರದ್ದುಗೊಳಿಸಿ ಕರ್ನಾಟಕ ಧಾರ್ಮಿಕ ಹಕ್ಕು ಸಂರಕ್ಷಣಾ ವಿಧೇಯಕ- 2023ಕ್ಕೆ ಅನುಮೋದನೆ ನೀಡಿದ್ದೇವೆ ಎಂದು ಸ್ಪಷ್ಟಪಡಿಸಿದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಯೂಟ್ಯೂಬ್ ಚಾನೆಲ್ ಸಬ್ಸ್ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ