ಸಾರ್ವಜನಿಕ ಕುಡಿಯುವ ನೀರಿನ ಟ್ಯಾಂಕ್‌ ಕೊಳೆತ ಶವ ಪತ್ತೆ

kayarthadka
14/05/2023

ಸಾರ್ವಜನಿಕ ಕುಡಿಯುವ ನೀರಿನ ಟ್ಯಾಂಕ್‌ ನಲ್ಲಿ ಅಪರಿಚಿತ ವ್ಯಕ್ತಿಯ ಕೊಳೆತ ಶವ ಪತ್ತೆಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದ ಕಾಯರ್ತಡ್ಕ ಉಮಾಮಹೇಶ್ವರ ದೇವಸ್ಥಾನ ಬಳಿ ನಡೆದಿದೆ.

ಈ ಟ್ಯಾಂಕ್‌ ನಿಂದ ಸ್ಥಳೀಯ ಪರಿಸರದಲ್ಲಿ ನೀರು ಪೂರೈಕೆ ಮಾಡಲಾಗಿದ್ದು, ನೀರು ದುರ್ವಾಸನೆ ಬರುತ್ತಿರುವುದನ್ನು ಸಾರ್ವಜನಿಕರು ಪಂಚಾಯತ್ ಗಮನಕ್ಕೆ ತಂದು ಟ್ಯಾಂಕ್ ಪರಿಶೀಲಿಸಿದಾಗ ಒಳಗೆ ನೋಡಿದಾಗ ಅಪರಿಚಿತ ವ್ಯಕ್ತಿಯ ಶವ ತೇಲಾಡುತ್ತಿರುವುದು ಪತ್ತೆಯಾಗಿದೆ. ಶವ ಕೊಳೆತು ಹೋಗಿದ್ದು, ಸುಮಾರು ನಾಲ್ಕು ದಿನಗಳ ಹಿಂದೆ ಈತ ಸಾವನ್ನಪ್ಪಿರಬಹುದೆಂದು ಅಂದಾಜಿಸಲಾಗಿದೆ.

ಟ್ಯಾಂಕ್ ನೀರನ್ನು ಸಾರ್ವಜನಿಕ ಉಪಯೋಗಿಸುತ್ತಿದ್ದು, ವಾಟ್ಸಪ್ ಮೂಲಕ ಹಾಗೂ ಸಾಮಾಜಿಕ ಜಾಲತಾಣಗಳ ಮೂಲಕ ಗ್ರಾಮಸ್ಥರು ಈ ನೀರು ಬಳಸಿದಂತೆ ವಿನಂತಿಸುತ್ತಿದ್ದಾರೆ.

ಕಾಯರ್ತಡ್ಕದ ವೈನ್ ಶಾಪ್ ಒಂದರಲ್ಲಿ ಕೆಲಸಕ್ಕಿದ್ದ ಹಿಂದಿ ಮಾತನಾಡುವ ಉತ್ತರ ಭಾರತದ ವ್ಯಕ್ತಿ ಕಳೆದ ಮೂರು ದಿನಗಳಿಂದ ನಾಪತ್ತೆಯಾಗಿದ್ದು ಮೃತ ವ್ಯಕ್ತಿ ಈತನೇ ಇರಬಹುದು ಎಂಬ ಅನುಮಾನ ವ್ಯಕ್ತವಾಗಿದೆ. ಧರ್ಮಸ್ಥಳ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಯೂಟ್ಯೂಬ್ ಚಾನೆಲ್ ಸಬ್ಸ್ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

FacebookTwitterWhatsappInstagramEmailTelegram

ಇತ್ತೀಚಿನ ಸುದ್ದಿ

Exit mobile version