ದೀಪಾವಳಿಗೆ ಸಿದ್ಧತೆ ನಡೆಸುತ್ತಿದ್ದ ಇಬ್ಬರು ಫೋಟೋ ಗ್ರಾಫರ್ಸ್ ವಿದ್ಯುತ್ ಶಾಕ್ ಗೆ ಬಲಿ
ಮಂಡ್ಯ: ವಿದ್ಯುತ್ ಶಾಕ್ ತಗಲಿ ಇಬ್ಬರು ಫೋಟೋ ಗ್ರಾಫರ್ಸ್ ಮೃತಪಟ್ಟಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಬೆಸಗರಹಳ್ಳಿಯಲ್ಲಿ ಶನಿವಾರ ನಡೆದಿದೆ.
ವಿವೇಕ್(45) ಮತ್ತು ಮಧುಸೂಧನ್(35) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಸ್ಟುಡಿಯೋ ಸ್ವಚ್ಛಗೊಳಿಸುತ್ತಿದ್ದ ವೇಳೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಆಗಿ ಇಬ್ಬರು ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ.
ದೀಪಾವಳಿ ಹಬ್ಬದ ಪ್ರಯುಕ್ತ ಸ್ಟುಡಿಯೋವನ್ನು ಸ್ವಚ್ಛಗೊಳಿಸುತ್ತಿದ್ದರು ಎನ್ನಲಾಗಿದೆ. ಈ ವೇಳೆ ವಿದ್ಯುತ್ ಆಘಾತಗೊಂಡು ಇಬ್ಬರು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/GoQnwP3qNkmAbAPcjb8n8F
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka