ಏಕಾಏಕಿ ಹೃದಯ ಬಡಿತ ಹೆಚ್ಚಳ: ಆಸ್ಪತ್ರೆಗೆ ದಾಖಲಾದ ದೀಪಿಕಾ ಪಡುಕೋಣೆ
ಹೈದರಾಬಾದ್: ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಹೃದಯ ಬಡಿತ ಹೆಚ್ಚಾದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೈದರಾಬಾದ್ ನಲ್ಲಿ ಚಿತ್ರದ ಶೂಟಿಂಗ್ ವೇಳೆ ದೀಪಿಕಾ ಹೃದಯ ಬಡಿತ ಹೆಚ್ಚಾಯಿತು. ಕೂಡಲೇ ಅವರನ್ನು ಕಾಮಿನೇನಿ ಆಸ್ಪತ್ರೆಗೆ ಸಾಗಿಸಲಾಯಿತು.
ಆಸ್ಪತ್ರೆಯಲ್ಲಿ ಚಿಕಿತ್ಸೆ ಬಳಿಕ ಹೃದಯ ಬಡಿತ ಸಹಜ ಸ್ಥಿತಿಗೆ ಮರಳಿದ ಬಳಿಕ ಶೂಟಿಂಗ್ ಸೆಟ್ ಗೆ ಮರಳಿದ್ದಾರೆ ಎಂದು ವರದಿಯಾಗಿದೆ. ಪ್ರಾಜೆಕ್ಟ್ ಕೆ ಚಿತ್ರದ ಶೂಟಿಂಗ್‌ಗಾಗಿ ದೀಪಿಕಾ ಪಡುಕೋಣೆ ಹೈದರಾಬಾದ್‌ಗೆ ಆಗಮಿಸಿದ್ದಾರೆ. ಚಿತ್ರದಲ್ಲಿ ದೀಪಿಕಾ ಜೊತೆಗೆ ಪ್ರಭಾಸ್ ಕೂಡ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.
ಪ್ಯಾನ್ ಇಂಡಿಯನ್ ಚಿತ್ರದಲ್ಲಿ ಅಮಿತಾಬ್ ಬಚ್ಚನ್ ಕೂಡ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇದೇ ಮೊದಲ ಬಾರಿಗೆ ದೀಪಿಕಾ ಪಡುಕೋಣೆ ಮತ್ತು ಪ್ರಭಾಸ್ ಒಟ್ಟಿಗೆ ಸ್ಕ್ರೀನ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಚಿತ್ರದಲ್ಲಿ ದಿಶಾ ಪಟ್ಟಾನಿ ಕೂಡ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LSRN1q7jVDz3PsMb1GzrwE
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಸಾಮಾಜಿಕ ಜಾಲತಾಣದಲ್ಲಿ ಪ್ರವಾದಿ ಬಗ್ಗೆ ಅವಹೇಳನ: ಯುವಕ ಅರೆಸ್ಟ್
ಮೆಟ್ರೋ ಕಾಮಗಾರಿಯ ಕಾರ್ಮಿಕನನ್ನು ಇರಿದು ಹತ್ಯೆ ಮಾಡಿದ ಪಾಪಿಗಳು!
ಜೂನ್ 20ರಂದು ಚಾಮುಂಡಿಬೆಟ್ಟಕ್ಕೆ ಪ್ರಧಾನಿ ಮೋದಿ ಭೇಟಿ
ವಿವಾಹದ ಬಳಿಕ ವೃತ್ತಿ ಜೀವನದಲ್ಲಿ ಮಹತ್ವದ ನಿರ್ಧಾರ ತೆಗೆದುಕೊಂಡ ನಯನತಾರಾ