ನಾಯಿಗಳ ದಾಳಿಗೆ ಜಿಂಕೆ ಬಲಿ
17/05/2023
ಕೊಟ್ಟಿಗೆಹಾರ: ನಾಯಿಗಳ ದಾಳಿಗೆ ಜಿಂಕೆಯೊಂದು ಬಲಿಯಾದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಟ್ಟಿಗೆಹಾರದ ನಿಡುವಾಳೆಯಲ್ಲಿ ಬುಧವಾರ ನಡೆದಿದೆ.
ಜಿಂಕೆಯೊಂದನ್ನು ಬೀದಿನಾಯಿಗಳು ಅಟ್ಟಿಸಿಕೊಂಡು ಬಂದಿದ್ದು, ನಿಡುವಾಳೆಯ ಚಂದ್ರಶೇಖರ್ ಎಂಬುವವರ ತೋಟದಲ್ಲಿ ನಾಯಿಗಳ ದಾಳಿಗೆ ಜಿಂಕೆ ಮೃತಪಟ್ಟಿದೆ.
ಸ್ಥಳಕ್ಕೆ ಉಪವಲಯ ಅರಣ್ಯಾಧಿಕಾರಿ ಗುರುಪ್ರಸಾದ್ ಅರಣ್ಯ ರಕ್ಷಕ ರಿಜ್ವಾನ್ ಭೇಟಿ ನೀಡಿದ್ದು ಜಿಂಕೆಯ ಮೃತ ದೇಹವನ್ನು ಮರಣೋತ್ತರ ಪರೀಕ್ಷೆ ನಡೆಸಲು ಕಳಸಕ್ಕೆ ತೆಗೆದುಕೊಂಡು ಹೋಗಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw