ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ದ ಮಾನನಷ್ಟ ಮೊಕದ್ದಮೆ: ಕಾಂಗ್ರೆಸ್ ಎಚ್ಚರಿಕೆ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಹಿಂದೆ 24 ಮಂದಿ ಹಿಂದುತ್ವವಾದಿಗಳನ್ನು ಕೊಲೆ ಮಾಡಿಸಿದ್ದಾರೆ ಎಂದು ಆರೋಪಿಸಿರುವ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ದ ಮಾನನಷ್ಟ ಮೊಕದ್ದಮೆ ದಾಖಲಿಸಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ, ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್ ಹೇಳಿದ್ದಾರೆ.
ಅವರು ಮಂಗಳೂರು ನಗರದ ಕಾಂಗ್ರೆಸ್ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಹಿಂದೆ 24 ಮಂದಿಯ ಕೊಲೆ ನಡೆಸಿದ್ದರೆ ಕಳೆದ ಮೂರುವರೆ ವರ್ಷ ಆಡಳಿತ ನಡೆಸಿದ್ದ ಬಿಜೆಪಿ ತನಿಖೆ ನಡೆಸದೆ ಮೌನವಾಗಿದ್ದುದು ಯಾತಕ್ಕೆ? ಶೇ.40ರಷ್ಟು ಕಮಿಷನ್ ಹಣವನ್ನು ಎಣಿಸುವುದರಲ್ಲೇ ತಲ್ಲೀನರಾದರೇ? ಎಂದು ಪ್ರಶ್ನಿಸಿದರು.
ಬೆಳ್ತಂಗಡಿಯಲ್ಲಿ ಬಿಜೆಪಿ ಕಾರ್ಯಕರ್ತರ ವಿಜಯೋತ್ಸವದಲ್ಲಿ ಮಾತನಾಡಿದ್ದ ಶಾಸಕ ಹರೀಶ್ ಪೂಂಜಾ, ಸಿದ್ದರಾಮಯ್ಯ ವಿರುದ್ಧ ಮಾಡಿದ ಗಂಭೀರ ಆರೋಪಕ್ಕೆ ಸಂಬಂಧಿಸಿದಂತೆ ಈಗಾಗಲೇ ಪ್ರಕರಣ ದಾಖಲಿಸಲಾಗಿದೆ. ಮಂಗಳೂರಿನಲ್ಲೂ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಕೇಸು ದಾಖಲಿಸಲಿದ್ದಾರೆ. ಈ ವಿಚಾರವನ್ನು ಇಲ್ಲಿಗೆ ಬಿಡುವುದಿಲ್ಲ, ಈ ಬಗ್ಗೆ ಡಿಸಿಸಿ ಕಾನೂನು ಘಟಕದ ಅಧ್ಯಕ್ಷರ ಜೊತೆ ಮಾತುಕತೆ ನಡೆಸಲಾಗಿದೆ. ಹರೀಶ್ ಪೂಂಜಾ ಕ್ಷಮೆಯಾಚಿಸದಿದ್ದರೆ ಕಾಂಗ್ರೆಸ್‌ನಿಂದ ಸಿವಿಲ್ ಮತ್ತು ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲಿಸುತ್ತೇವೆ ಎಂದು ಹರೀಶ್ ಕುಮಾರ್ ತಿಳಿಸಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw