ಉಪ ಚುನಾವಣೆಯಲ್ಲಿ ಸೋಲು: ಮನೆಯ ಟಿವಿ ಒಡೆದು ಹಾಕಿದ ಬಿಜೆಪಿ ಕಾರ್ಯಕರ್ತ! - Mahanayaka
12:38 AM Wednesday 5 - February 2025

ಉಪ ಚುನಾವಣೆಯಲ್ಲಿ ಸೋಲು: ಮನೆಯ ಟಿವಿ ಒಡೆದು ಹಾಕಿದ ಬಿಜೆಪಿ ಕಾರ್ಯಕರ್ತ!

veerabhadra
23/11/2024

ವಿಜಯಪುರ: ಉಪ ಚುನಾವಣೆಯಲ್ಲಿ ಬಿಜೆಪಿಗೆ ಸೋಲಾಗಿರುವುದರಿಂದ ಆಕ್ರೋಶಗೊಂಡ ಬಿಜೆಪಿ ಕಾರ್ಯಕರ್ತನೊಬ್ಬ ಮನೆಯ ಟಿವಿಯನ್ನು ಒಡೆದು ಹಾಕಿ ಆಕ್ರೋಶ ವ್ಯಕ್ತಪಡಿಸಿರುವ ಘಟನೆ  ವಿಜಯಪುರ ಜಿಲ್ಲೆಯ ಕೋಲ್ಹಾರ ಪಟ್ಟಣದಲ್ಲಿ ನಡೆದಿದೆ.

ಬಿಜೆಪಿ ಕಾರ್ಯಕರ್ತ ವೀರಭದ್ರಪ್ಪ ಭಾಗಿ ಎಂಬಾತ ತನ್ನ ಮನೆಯಲ್ಲಿನ ಟಿವಿಯನ್ನು ಒಡೆದು ಹಾಕಿ  ಉಪ ಚುನಾವಣೆ ಸೋಲಿನ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾನೆ.

ಬಿಜೆಪಿ—ಜೆಡಿಎಸ್ ಮೈತ್ರಿ ಪಕ್ಷಗಳಿದ್ದರೂ ಉಪ ಚುನಾವಣೆಯಲ್ಲಿ ಒಂದು ಸ್ಥಾನವನ್ನೂ ಗೆಲ್ಲಲು ಸಾಧ್ಯವಾಗಿಲ್ಲ. ಇಬ್ಬರು ಮಾಜಿ ಮುಖ್ಯಮಂತ್ರಿಗಳ ಪುತ್ರರಿಗೂ ಉಪ ಚುನಾವಣೆಯಲ್ಲಿ ಸೋಲಾಗಿದೆ. ಇದಕ್ಕೆಲ್ಲ ಬಿಜೆಪಿ ನಾಯಕರ ಗುಂಪುಗಾರಿಕೆಯೇ ಕಾರಣ ಅಂತ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.  ಬಿಜೆಪಿ ನಾಯಕರ ಒಡಕಿನಿಂದ ಈ ಸೋಲಾಗಿದೆ ಎಂದು ವೀರಭದ್ರಪ್ಪ ಮನೆಯ ಟಿವಿಯನ್ನೇ ಒಡೆದು ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆನ್ನಲಾಗಿದೆ.

ಬಿಜೆಪಿ ನಾಯಕರ ವೈಯಕ್ತಿಕ ಹಿತಾಸಕ್ತಿ ಪಕ್ಷದ ಮೇಲೆ ಪರಿಣಾಮ ಬೀರುತ್ತಿದೆ. ಬಿಜೆಪಿಯಲ್ಲಿ ಒಗ್ಗಟ್ಟಿಲ್ಲ. ಯಾವುದೇ ಹೋರಾಟಗಳು ಒಗ್ಗಟ್ಟಿಲ್ಲದಂತೆ ಸಾಗುತ್ತಿದೆ. ಇತ್ತ ವಿಜಯೇಂದ್ರ ಬಣ, ಅತ್ತ ಯತ್ನಾಳ್ ಬಣವಾಗಿ ಮಾರ್ಪಟ್ಟಿದೆ. ಇವರನ್ನು ಅವರು ದೂರುವುದು ಅವರನ್ನು ಇವರು ದೂರುವುದು. ಇದರಿಂದಾಗಿ ಪಕ್ಷ ದುರ್ಬಳವಾಗ್ತಿದೆ ಎಂದು ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ