ಬಾಂಬ್ ಬೆದರಿಕೆ: ದೆಹಲಿಯಿಂದ ರೋಮ್ ಗೆ ತೆರಳುತ್ತಿದ್ದ ಅಮೆರಿಕನ್ ಏರ್ ಲೈನ್ಸ್ ವಿಮಾನ ವಾಪಸ್

ನ್ಯೂಯಾರ್ಕ್ ನಿಂದ ದೆಹಲಿಗೆ ತೆರಳುತ್ತಿದ್ದ ಅಮೆರಿಕನ್ ಏರ್ ಲೈನ್ಸ್ ವಿಮಾನವನ್ನು ಇಮೇಲ್ ಮೂಲಕ ಬಾಂಬ್ ಬೆದರಿಕೆ ಬಂದ ನಂತರ ಭಾನುವಾರ ರೋಮ್ ಗೆ ತಿರುಗಿಸಲಾಗಿದೆ. ಬಾಂಬ್ ಬೆದರಿಕೆ ಬಂದ ನಂತರ ಈ ವಿಮಾನವು ತಪಾಸಣೆಗಾಗಿ ರೋಮ್ ವಿಮಾನ ನಿಲ್ದಾಣದಲ್ಲಿ ಇಳಿಯಲಿದೆ. ರೋಮ್ ವಿಮಾನ ನಿಲ್ದಾಣದಲ್ಲಿ ಭದ್ರತಾ ಅನುಮತಿ ಪಡೆದ ನಂತರ ವಿಮಾನ ದೆಹಲಿಗೆ ತೆರಳಲಿದೆ ಎಂದು ಮೂಲಗಳು ತಿಳಿಸಿವೆ.
ಬೋಯಿಂಗ್ 783 ಡ್ರೀಮ್ ಲೈನರ್ ಫೆಬ್ರವರಿ 22 ರಂದು ಜಾನ್ ಎಫ್ ಕೆನಡಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಟಿತ್ತು. ಈ ಬಾಂಬ್ ಬೆದರಿಕೆಯ ನಂತರ ಯುರೋಪಿಗೆ ಹಿಂತಿರುಗುವ ಮೊದಲು ಇದು ಕ್ಯಾಸ್ಪಿಯನ್ ಸಮುದ್ರವನ್ನು ದಾಟಿತ್ತು.
ನ್ಯೂಯಾರ್ಕ್ ನಿಂದ ದೆಹಲಿಗೆ ಕಾರ್ಯನಿರ್ವಹಿಸುತ್ತಿರುವ ಎಎ 292 ವಿಮಾನವನ್ನು ಸಂಭಾವ್ಯ ಭದ್ರತಾ ಬೆದರಿಕೆಯಿಂದಾಗಿ ರೋಮ್ ಗೆ ತಿರುಗಿಸಲಾಗಿದೆ. ಸ್ಥಳೀಯ ಅಧಿಕಾರಿಗಳೊಂದಿಗೆ ಪರಿಸ್ಥಿತಿಯನ್ನು ನಿಕಟವಾಗಿ ಮೇಲ್ವಿಚಾರಣೆ ಮಾಡುತ್ತಿದ್ದೇವೆ ಎಂದು ವಿಮಾನಯಾನ ಸಂಸ್ಥೆ ಭರವಸೆ ನೀಡಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BHOOdLNNvmD17cBJslQgwj