ಕೋರ್ಟ್ ಆವರಣದಲ್ಲೇ ಗುಂಡಿನ ದಾಳಿ: ವಕೀಲರ ವಾಗ್ವಾದದ ಮಧ್ಯೆ ಗುಂಡಿನ ಸದ್ದು..!
ನವದೆಹಲಿಯ ತೀಸ್ ಹಜಾರಿ ಕೋರ್ಟ್ ಆವರಣದಲ್ಲಿ ಇಂದು ಗುಂಡಿನ ದಾಳಿ ನಡೆದಿದೆ. ಇದ್ದಕ್ಕಿದ್ದಂತೆ ಕೆಲವು ವಕೀಲರು ತೀವ್ರ ವಾಗ್ವಾದದಲ್ಲಿ ತೊಡಗಿದ ನಂತರ ಈ ಗುಂಡಿನ ದಾಳಿ ನಡೆದಿದೆ ಎಂದು ದೆಹಲಿ ಪೊಲೀಸ್ ಮೂಲಗಳು ತಿಳಿಸಿವೆ.
ಪೊಲೀಸರು ಸಮಯಕ್ಕೆ ಸರಿಯಾಗಿ ಸ್ಥಳಕ್ಕಾಗಮಿಸಿದ್ದು, ಗುಂಡಿನ ದಾಳಿಯಲ್ಲಿ ಯಾವುದೇ ಗಾಯಗಳಾಗಿಲ್ಲ. ಗುಂಡಿನ ದಾಳಿಯನ್ನು ದೆಹಲಿಯ ಬಾರ್ ಕೌನ್ಸಿಲ್ ಅಧ್ಯಕ್ಷ ಕೆಕೆ ಮನನ್ ಖಂಡಿಸಿದ್ದು, ಈ ಬಗ್ಗೆ ವಿವರವಾದ ತನಿಖೆ ನಡೆಸಲಾಗುವುದು. ಯಾವುದೇ ವಕೀಲರು ನ್ಯಾಯಾಲಯದ ಆವರಣದಲ್ಲಿ ಶಸ್ತ್ರಾಸ್ತ್ರಗಳನ್ನು ಬಳಸುವಂತಿಲ್ಲ ಎಂದು ಅವರು ಹೇಳಿದರು.
ಶಸ್ತ್ರಾಸ್ತ್ರಗಳಿಗೆ ಪರವಾನಗಿ ನೀಡಲಾಗಿದೆಯೇ ಅಥವಾ ಇಲ್ಲವೇ ಎಂಬುದನ್ನು ಕೂಡ ತನಿಖೆ ನಡೆಸಲಾಗುವುದು. ಶಸ್ತ್ರಾಸ್ತ್ರಗಳು ಪರವಾನಗಿ ಪಡೆದಿದ್ದರೂ ಸಹ, ಯಾವುದೇ ವಕೀಲರು ಅಥವಾ ಬೇರೆಯವರು ನ್ಯಾಯಾಲಯದ ಆವರಣದ ಒಳಗೆ ಅಥವಾ ಸುತ್ತಮುತ್ತ ಈ ರೀತಿಯಾಗಿ ಬಳಸುವಂತಿಲ್ಲ ಎಂದು ಹೇಳಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw