ಬೆಡ್ ಬಾಕ್ಸ್ ನಲ್ಲಿ ಮಹಿಳೆಯ ಶವ ಪತ್ತೆ ಕೇಸ್: ಫ್ಲಾಟ್ ಮಾಲೀಕನ ಬಂಧನ

ಪೂರ್ವ ದೆಹಲಿಯ ಫ್ಲ್ಯಾಟ್ ನಲ್ಲಿ ಬೆಡ್ ಬಾಕ್ಸ್ ನಲ್ಲಿ ತುಂಬಿದ ಮಹಿಳೆಯ ಕೊಳೆತ ಶವ ಪತ್ತೆಯಾದ ಒಂದು ದಿನದ ನಂತರ, ಪೊಲೀಸರು ಫ್ಲಾಟ್ ಮಾಲೀಕನನ್ನು ಮತ್ತು ಸಂತ್ರಸ್ತೆಯ ಪತಿಯ ಸಹಾಯಕನನ್ನು ಬಂಧಿಸಿದ್ದಾರೆ.
ಪೊಲೀಸರ ಪ್ರಕಾರ, ಘಟನೆಯ ನಂತರ ಪತಿ ಇನ್ನೂ ಪತ್ತೆಯಾಗಿಲ್ಲ. ಆರೋಪಿಗಳಲ್ಲಿ ಓರ್ವನಾದ ಫ್ಲಾಟ್ ಮಾಲೀಕ ವಿವೇಕಾನಂದ ಮಿಶ್ರಾ ಅವರನ್ನು ಶುಕ್ರವಾರ ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳಲಾಗಿದ್ದು, ಶನಿವಾರ ಬಂಧಿಸಲಾಗಿದೆ.
ವಿಚಾರಣೆಯ ಸಮಯದಲ್ಲಿ ಅವನು ಅಪರಾಧವನ್ನು ಒಪ್ಪಿಕೊಂಡಿದ್ದಾನೆ ಮತ್ತು ಗಂಡನ ಸಹಾಯಕ ಅಭಯ್ ಕುಮಾರ್ ಮತ್ತು ಪತಿಯೂ ಕೂಡಾಭಾಗಿಯಾಗಿರುವುದನ್ನು ಬಹಿರಂಗಪಡಿಸಿದ್ದಾನೆ.
ಇಬ್ಬರೂ ಆರೋಪಿಗಳು ತನಿಖೆಯನ್ನು ದಾರಿತಪ್ಪಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ. ಪತಿಯನ್ನು ಹಿಡಿದ ನಂತರವೇ ಕೊಲೆಯ ಉದ್ದೇಶ ಸ್ಪಷ್ಟವಾಗುತ್ತದೆ ಎಂದು ಪೊಲೀಸರು ಹೇಳಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BHOOdLNNvmD17cBJslQgwj