ದೆಹಲಿಯಲ್ಲಿ ಹೆಚ್ಚಿನ ಮಳೆ ಸಾಧ್ಯತೆ: ಯಮುನಾ ಮತ್ತೆ ಅಪಾಯದ ಮಟ್ಟಕ್ಕೇರಿಕೆ
ಗುರುವಾರ ದೆಹಲಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಹೇಳಿದೆ.
ಅಲ್ಲದೇ ಮುಂದಿನ ಐದರಿಂದ ಆರು ದಿನಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯಿದ್ದರೂ, ತೀವ್ರತೆ ಕ್ರಮೇಣ ಕಡಿಮೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬುಧವಾರ ದೆಹಲಿಯ ಕೆಲವು ಭಾಗಗಳಲ್ಲಿ ಭಾರಿ ಮಳೆಯಾಗಿದ್ದರಿಂದ ಜಲಾವೃತ ಮತ್ತು ಟ್ರಾಫಿಕ್ ಜಾಮ್ ಗೆ ಕಾರಣವಾಯಿತು. ಮಳೆಯು ತಾಪಮಾನವನ್ನು 23.8 ಡಿಗ್ರಿ ಸೆಲ್ಸಿಯಸ್ ಗೆ ಇಳಿಸಿತು. ಇದು ಸಾಮಾನ್ಯಕ್ಕಿಂತ ಮೂರು ಡಿಗ್ರಿ ಕಡಿಮೆಯಾಗಿದೆ. ಗರಿಷ್ಠ ತಾಪಮಾನವು 31.3 ಡಿಗ್ರಿ ಸೆಲ್ಸಿಯಸ್ ಗೆ ಇಳಿದಿದೆ. ಇದು ಸಾಮಾನ್ಯಕ್ಕಿಂತ ನಾಲ್ಕು ಡಿಗ್ರಿ ಕಡಿಮೆಯಾಗಿದೆ.
ಕಳೆದ ಕೆಲವು ದಿನಗಳಲ್ಲಿ ಗರಿಷ್ಠ ತಾಪಮಾನವು 38 ಡಿಗ್ರಿ ಸೆಲ್ಸಿಯಸ್ ಆಸುಪಾಸಿನಲ್ಲಿತ್ತು. ಹೆಚ್ಚಿನ ತೇವಾಂಶದ ಜೊತೆಗೆ ಸಾಮಾನ್ಯಕ್ಕಿಂತ ಹೆಚ್ಚಿನ ತಾಪಮಾನವು ನಗರದ ನಿವಾಸಿಗಳಿಗೆ ತೊಂದರೆಯನ್ನುಂಟು ಮಾಡಿತ್ತು.
ಏತನ್ಮಧ್ಯೆ, ರಾಜಧಾನಿ ಮತ್ತು ಮೇಲ್ಭಾಗದ ಜಲಾನಯನ ಪ್ರದೇಶಗಳಲ್ಲಿ ಭಾರಿ ಮಳೆಯಿಂದಾಗಿ ದೆಹಲಿಯ ಯಮುನಾ ಬುಧವಾರ 205.33 ಮೀಟರ್ ಅಪಾಯದ ಮಟ್ಟವನ್ನು ದಾಟಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ74835 51849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/BnbLYSQaXK1Hate4P0Bt3B
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw