ದಿಲ್ಲಿಯಲ್ಲಿ ವಿದ್ಯಾರ್ಥಿಗೆ ಚಾಕುವಿನಿಂದ ಇರಿದು ಹತ್ಯೆ
ತರಗತಿಯ ನಂತರ ವಿದ್ಯಾರ್ಥಿಗಳ ನಡುವೆ ನಡೆದ ತೀವ್ರ ವಾಗ್ವಾದ ಭುಗಿಲೆದ್ದ ನಂತರ ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿಯನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದೆ.
ರಾಮ್ ಲಾಲ್ ಆನಂದ್ ಕಾಲೇಜಿನಲ್ಲಿ ಎಸ್ಒಎಲ್ ನ ಮೊದಲ ವರ್ಷದ ಎರಡನೇ ಸೆಮಿಸ್ಟರ್ ತರಗತಿ ನಡೆಯುತ್ತಿತ್ತು.
ತರಗತಿಯ ನಂತರ ಇಬ್ಬರು ವಿದ್ಯಾರ್ಥಿಗಳ ನಡುವೆ ವಾಗ್ವಾದ ನಡೆದಿದೆ. ಅವರಲ್ಲಿ ಒಬ್ಬರು ಇನ್ನೊಬ್ಬರಿಗೆ ಚಾಕುವಿನಿಂದ ಇರಿದಿದ್ದರಿಂದ ಘಟನೆ ಹಿಂಸೆಗೆ ತಿರುಗಿದೆ.
ಆರೋಪಿಯನ್ನು ಗುರುತಿಸಲಾಗಿದೆ ಎಂದು ದೆಹಲಿ ಪೊಲೀಸರು ಹೇಳಿಕೆ ನೀಡಿದ್ದಾರೆ. ಪೊಲೀಸರು ಆತನನ್ನು ಪತ್ತೆಹಚ್ಚಲು ಶೋಧ ನಡೆಸುತ್ತಿದ್ದಾರೆ. ವಿದ್ಯಾರ್ಥಿಯ ಶವವನ್ನು ವಶಕ್ಕೆ ತೆಗೆದುಕೊಂಡು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.
ಮಾಧ್ಯಮ ವರದಿಯ ಪ್ರಕಾರ, ದೆಹಲಿ ವಿಶ್ವವಿದ್ಯಾಲಯದ ದಕ್ಷಿಣ ಕ್ಯಾಂಪಸ್‌ನ ರಾಮ್ ಲಾಲ್ ಆನಂದ್ ಕಾಲೇಜಿನಲ್ಲಿ ತರಗತಿಯ ಸಮಯದಲ್ಲಿ ವಿದ್ಯಾರ್ಥಿಗಳು ಘರ್ಷಣೆ ನಡೆಸಿದ್ದಾರೆ. ತೀವ್ರವಾಗಿ ಗಾಯಗೊಂಡ ವಿದ್ಯಾರ್ಥಿಯನ್ನು ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಮೃತಪಟ್ಟಿದ್ದಾನೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw