ದೆಹಲಿ ವಿಧಾನಸಭೆಯಿಂದ ಕೆಂಪುಕೋಟೆಯನ್ನು ಸಂಪರ್ಕಿಸುವ ರಹಸ್ಯ ಸುರಂಗಮಾರ್ಗ ಪತ್ತೆ
ನವದೆಹಲಿ: ದೆಹಲಿ ವಿಧಾನಸಭೆಯಿಂದ ಕೆಂಪುಕೋಟೆಯನ್ನು ಸಂಪರ್ಕಿಸುವ ರಹಸ್ಯ ಸುರಂಗಮಾರ್ಗವನ್ನು ಪತ್ತೆಹಚ್ಚಲಾಗಿದ್ದು, ಇದು ತೀವ್ರ ಕುತೂಹಲವನ್ನು ಕೆರಳಿಸಿದೆ. ಸ್ವಾತಂತ್ರ್ಯ ಪೂರ್ವದಲ್ಲಿ ಬ್ರಿಟೀಷರು ಈ ಸುರಂಗ ಮಾರ್ಗವನ್ನು ಬಳಸುತ್ತಿದ್ದರು ಎಂದು ತಿಳಿದು ಬಂದಿದೆ.
ಸುರಂಗಮಾರ್ಗವು ವಿಧಾನಸಭೆಯಿಂದ ಕೆಂಪುಕೋಟೆಯನ್ನು ಸಂಪರ್ಕಿಸುತ್ತದೆ ಎಂದು ದೆಹಲಿ ವಿಧಾನಸಭಾ ಸ್ಪೀಕರ್ ರಾಮ್ ನಿವಾಸ್ ಗೋಯೆಲ್ ಮಾಹಿತಿ ನೀಡಿದ್ದು, 1993ರಲ್ಲಿ ನಾನು ಶಾಸಕನಾಗಿದ್ದ ಸಂದರ್ಭದಲ್ಲಿ ಕೆಂಪುಕೋಟೆಯೊಳಗಿನ ಸುರಂಗ ಮಾರ್ಗದ ಬಗ್ಗೆ ಕೇಳಿದ್ದೆ. ಹೆಚ್ಚಿನ ಮಾಹಿತಿ ಕಲೆ ಹಾಕಲು ಕೂಡ ಪ್ರಯತ್ನಿಸಿದ್ದೆ. ಆದರೆ ಅದರ ಬಗ್ಗೆ ಸ್ಪಷ್ಟತೆ ಇದ್ದಿರಲಿಲ್ಲ ಎಂದು ಹೇಳಿದ್ದಾರೆ,
ಈಗ ಸುರಂಗದ ಎದುರಿನ ಭಾಗ ಪತ್ತೆಯಾಗಿದೆ. ಆದರೆ, ಮೆಟ್ರೋ ಯೋಜನೆ ಹಾಗೂ ಒಳಚರಂಡಿ ಸ್ಥಾಪನೆಯಿಂದಾಗಿ ಸುರಂಗ ಮಾರ್ಗ ನಾಶವಾಗಿದೆ. ಹಾಗಾಗಿ ಮತ್ತಷ್ಟು ಅಗೆಯುವ ಅಗತ್ಯವಿಲ್ಲ. ಈ ಸುರಂಗ ಮಾರ್ಗವನ್ನು 1926ರಲ್ಲಿ ದೆಹಲಿ ಶಾಸಕಾಂಗ ಸಭೆಯನ್ನು ನ್ಯಾಯಾಲಯವಾಗಿ ಬಳಸಲಾಗುತ್ತಿತ್ತು. ಈ ಸುರಂಗ ಮಾರ್ಗವನ್ನು ಸ್ವಾತಂತ್ರ್ಯ ಹೋರಾಟಗಾರರನ್ನು ನ್ಯಾಯಾಲಯಕ್ಕೆ ಕರೆತರಲು ಬಳಸುತ್ತಿದ್ದರು ಎಂದು ಗೋಯೆಲ್ ತಿಳಿಸಿದ್ದಾರೆ.
ಇನ್ನಷ್ಟು ಸುದ್ದಿಗಳು…
ರಾತ್ರಿ 3 ಗಂಟೆಗೆ ಎದ್ದು ಎದೆಯನ್ನು ಒತ್ತಿ ಹಿಡಿದಂತಾಗುತ್ತಿದೆ ಎಂದು ಅಮ್ಮನಿಗೆ ಹೇಳಿದ್ದ ಸಿದ್ಧಾರ್ಥ್ ಶುಕ್ಲಾ
ಪಡಿತರ ಚೀಟಿದಾರರರಿಗೆ ಸಿಹಿ ಸುದ್ದಿ: ಇ-ಕೆವೈಸಿ ಅವಧಿ ವಿಸ್ತರಣೆ
ಜಾಮೀನಿನಲ್ಲಿ ಹೊರ ಬಂದ ಲೈಂಗಿಕ ಕಿರುಕುಳದ ಆರೋಪಿ ಸಂತ್ರಸ್ತೆಯನ್ನು ಗುಂಡಿಟ್ಟು ಕೊಂದ!
ಪಬ್ ನಲ್ಲಿ ಅಪ್ರಾಪ್ತ ಬಾಲಕಿ ಡಾನ್ಸ್ ಮಾಡುತ್ತಿರುವ ವಿಡಿಯೋ ವೈರಲ್: ಪಬ್ ಮ್ಯಾನೇಜ್ ಮೆಂಟ್ ಗೆ ಸಂಕಷ್ಟ!
‘ವಿಕ್ರಾಂತ್ ರೋಣ’: ಡೆಡ್ ಮ್ಯಾನ್ ಆಂಥಮ್ ಸೃಷ್ಟಿಸಿತು ಹೊಸ ಕುತೂಹಲ!
ಆತ್ಮಹತ್ಯೆ ಮಾಡಲು ನೀರಿಗೆ ಹಾರಿದ ಕುಡುಕನ ರಕ್ಷಣೆಗೆ ಹೋದ ಇಬ್ಬರು ಸಾವು | ಕುಡುಕ ಸೇಫ್!
ಮಹಿಳೆ ಜೊತೆಗೆ ಅಕ್ರಮ ಸಂಬಂಧ: ಕಾನ್ ಸ್ಟೇಬಲ್ ನ ಕೈ ಕಾಲು ಕಟ್ಟಿ ಹಿಗ್ಗಾಮುಗ್ಗಾ ಥಳಿತ