ಬಿಜೆಪಿಯಲ್ಲಿ ಅತೃಪ್ತಿಯ ಉರಿ: ದೆಹಲಿಯಲ್ಲಿ ಬೀಡು ಬಿಟ್ಟ ರಮೇಶ್ ಜಾರಕಿಹೊಳಿ ತಂಡ - Mahanayaka
2:14 PM Wednesday 5 - February 2025

ಬಿಜೆಪಿಯಲ್ಲಿ ಅತೃಪ್ತಿಯ ಉರಿ: ದೆಹಲಿಯಲ್ಲಿ ಬೀಡು ಬಿಟ್ಟ ರಮೇಶ್ ಜಾರಕಿಹೊಳಿ ತಂಡ

ramesh jarakiholi cpy
10/08/2021

ಬೆಂಗಳೂರು:  ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸಂಪುಟದಲ್ಲಿ ಎದ್ದಿರುವ ಅಸಮಾಧಾನ ಇದೀಗ ದೆಹಲಿಗೆ ತಲುಪಿದ್ದು,  ಆನಂದ್ ಸಿಂಗ್, ಎಂಟಿಬಿ ಅಸಮಾಧಾನದ ಬೆನ್ನಲ್ಲೇ ಇದೀಗ ಅತೃಪ್ತರ ತಂಡ ದೆಹಲಿಯಲ್ಲಿ ಬೀಡುಬಿಟ್ಟಿದೆ ಎನ್ನುವ ಮಾಹಿತಿ ಲಭ್ಯವಾಗಿದ್ದು, ಸಿ.ಪಿ.ಯೋಗೇಶ್ವರ್ ಹಾಗೂ ರಮೇಶ್ ಜಾರಕಿಹೊಳಿ ಅತೃಪ್ತರ ನೇತೃತ್ವ ಪಡೆದುಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.

ನಾಯಕತ್ವ ಬದಲಾವಣೆ, ಸಂಪುಟ ರಚನೆವರೆಗೆ ಸುಮ್ಮನಿದ್ದ ರಮೇಶ್ ಜಾರಕಿಹೊಳಿ ಇದೀಗ ದಿಢೀರನೇ ರಾಜಕೀಯ ರಂಗವನ್ನು ಪ್ರವೇಶಿಸಿದ್ದು,  ಆರಂಭದಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರನ್ನು ಭೇಟಿಯಾಗಿದ್ದರು. ಇದರ ಜೊತೆಗೆ ಈ ಸರ್ಕಾರ ಹೆಚ್ಚು ದಿನ ಉಳಿಯುವುದಿಲ್ಲ ಎಂದು ರಮೇಶ್ ಜಾರಕಿಹೊಳಿ ತಮ್ಮ ಆಪ್ತರ ಜೊತೆಗೆ ಹೇಳಿಕೊಂಡಿದ್ದಾರೆ ಎಂದು ಹೇಳಲಾಗಿದೆ.

ಸಿಡಿ ಪ್ರಕರಣದ ಹಿನ್ನೆಲೆಯಲ್ಲಿ ರಮೇಶ್ ಜಾರಕಿಹೊಳಿ ಸಂಪುಟ ಸೇರ್ಪಡೆ ಸಾಧ್ಯವಿಲ್ಲ ಎಂದು ಬಿಜೆಪಿ ಹೇಳಿತ್ತು. ಹೀಗಾಗಿ ಸಹೋದರ ಬಾಲಚಂದ್ರ ಜಾರಕಿಹೊಳಿಗೆ ಮಂತ್ರಿ ಸ್ಥಾನ ನೀಡಬೇಕು ಎಂದು ರಮೇಶ್ ಜಾರಕಿಹೊಳಿ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಆದರೆ ಇದಕ್ಕೂ ಬಿಜೆಪಿ ಒಪ್ಪಿಗೆ ಸೂಚಿಸಿಲ್ಲ. ಹೀಗಾಗಿ ಇದೀಗ ಸರ್ಕಾರದ ವಿರುದ್ಧ ಅವರು ತೀವ್ರ ಅಸಮಾಧಾನಗೊಂಡಿದ್ದಾರೆ ಎಂದು ಹೇಳಲಾಗಿದೆ.

ಇನ್ನೂ ದೆಹಲಿಗೆ ಹೋಗಿರುವ ರಮೇಶ್ ಜಾರಕಿಹೊಳಿ ಮತ್ತು ತಂಡ ದೆಹಲಿಯಲ್ಲಿ ವರಿಷ್ಠರ ಭೇಟಿಗಾಗಿ ಕಾಯುತ್ತಿದ್ದು, ಈವರೆಗೆ ವರಿಷ್ಠರ ಭೇಟಿ ಸಾಧ್ಯವಾಗಿಲ್ಲ ಎಂದು ಹೇಳಲಾಗಿದೆ. ಹೀಗಾಗಿ ದೆಹಲಿಯಲ್ಲಿಯೇ ಬೀಡು ಬಿಟ್ಟಿರುವ ತಂಡ ವರಿಷ್ಠರ ಭೇಟಿಯ ಬಳಿಕವೇ ವಾಪಸ್ ಆಗಲಿದ್ದಾರೆ ಎಂದು ಹೇಳಲಾಗಿದೆ.

ಇನ್ನಷ್ಟು ಸುದ್ದಿಗಳು…

ದೇವೇಗೌಡರನ್ನು ಭೇಟಿಯಾದ ಸಿ.ಟಿ.ರವಿ | ಹಲವು ಸಮಯಗಳವರೆಗೆ ಚರ್ಚೆ

ಇಡಿ ದಾಳಿ: ಕುಮಾರಸ್ವಾಮಿ ವಿರುದ್ಧ ಅನುಮಾನ ವ್ಯಕ್ತಪಡಿಸಿದ ಜಮೀರ್!

ಸಚಿವರಾದರೂ ಜೀಪ್ ನಿಂದ ಇಳಿದು ಸಾಮಾನ್ಯರಂತೆ ನಡೆದ ಸಚಿವ ಅಂಗಾರ! | ಇದು ಸರಳತೆ ಅಲ್ಲ, ವೈಫಲ್ಯ!

ಪ್ರಾಜೆಕ್ಟ್ ವರ್ಕ್ ನೆಪದಲ್ಲಿ ಮನೆಗೆ ಕರೆಸಿ ವಿದ್ಯಾರ್ಥಿನಿಯ ಮೇಲೆ ಶಿಕ್ಷಕನಿಂದ ಅತ್ಯಾಚಾರ, ಬ್ಲ್ಯಾಕ್ ಮೇಲ್

ಪಿಕ್ನಿಕ್ ಗೆ ಹೋಗಿದ್ದ ಒಂದೇ ಕುಟುಂಬದ ನಾಲ್ವರು ಕುಟುಂಬಸ್ಥರ ಕಣ್ಣ ಮುಂದೆಯೇ ನೀರುಪಾಲಾದರು!

ಇತ್ತೀಚಿನ ಸುದ್ದಿ