ರಾಷ್ಟ್ರ ರಾಜಧಾನಿಯಲ್ಲಿ ಮಹಿಳಾ ದರ್ಬಾರ್: ಬಿಜೆಪಿಯ ‘ರೇಖಾ’ ಆಡಳಿತ ಶುರು

ದೆಹಲಿ ಮುಖ್ಯಮಂತ್ರಿ ಯಾರಾಗಲಿದ್ದಾರೆ ಎಂಬ ಕುತೂಹಲಕ್ಕೆ ತೆರೆಬಿದ್ದಿದ್ದು ನೂತನ ಮುಖ್ಯಮಂತ್ರಿಯಾಗಿ ರೇಖಾ ಗುಪ್ತಾ ಪ್ರಮಾಣವಚನ ಸ್ವೀಕರಿಸಿದ್ದಾರೆ. ದೆಹಲಿಯಲ್ಲಿ ನಾಲ್ಕನೇ ಬಾರಿಗೆ ಮಹಿಳಾ ಶಾಸಕರೊಬ್ಬರು ಮುಖ್ಯಮಂತ್ರಿಯಾಗಿದ್ದಾರೆ. ಈ ಹಿಂದೆ ಬಿಜೆಪಿಯಿಂದ ಸುಷ್ಮಾ ಸ್ವರಾಜ್, ಕಾಂಗ್ರೆಸ್ ನಿಂದ ಶೀಲಾ ದೀಕ್ಷಿತ್, ಆಮ್ ಆದ್ಮಿ ಪಾರ್ಟಿಯಿಂದ ಆತಿಶಿ ದೆಹಲಿಯ ಮುಖ್ಯಮಂತ್ರಿಯಾಗಿದ್ದರು.
ದೆಹಲಿಯಲ್ಲಿ ಬಿಜೆಪಿ 26 ವರ್ಷಗಳ ನಂತರ ಅಧಿಕಾರಕ್ಕೆ ಮರಳಿದ್ದು, ರಾಮಲೀಲಾ ಮೈದಾನದಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ಏರ್ಪಟ್ಟಿದ್ದು, ಪ್ರಧಾನಿ ನರೇಂದ್ರ ಮೋದಿ, ಇತರ ಹಿರಿಯ ಬಿಜೆಪಿ ನಾಯಕರು ಮತ್ತು ಎನ್‌ಡಿಎ ಮಿತ್ರಪಕ್ಷಗಳ ನಾಯಕರು ಭಾಗವಹಿಸಿದ್ದರು.
70 ಸದಸ್ಯ ಬಲದ ದೆಹಲಿ ವಿಧಾನಸಭೆಗೆ ಫೆಬ್ರುವರಿ 5ರಂದು ಮತದಾನ ನಡೆದಿತ್ತು. ಫೆ.8ರಂದು ಪ್ರಕಟವಾದ ಚುನಾವಣಾ ಫಲಿತಾಂಶದಲ್ಲಿ ಬಿಜೆಪಿ 48 ಕ್ಷೇತ್ರಗಳಲ್ಲಿ ಭರ್ಜರಿ ಗೆಲುವು ಸಾಧಿಸುವ ಮೂಲಕ 26 ವರ್ಷಗಳ ಬಳಿಕ ದೆಹಲಿಯಲ್ಲಿ ಅಧಿಕಾರದ ಗದ್ದುಗೆ ಏರಿದೆ. ಎಎಪಿ 22 ಸ್ಥಾನಗಳನ್ನು ಗೆದ್ದು ದಶಕಗಳ ಆಡಳಿತವನ್ನು ಕೊನೆಗೊಳಿಸಿದೆ.
ಮುಖ್ಯಮಂತ್ರಿ ಹುದ್ದೆಗೆ ಸ್ಪರ್ಧೆಯಲ್ಲಿ ಪ್ರವೇಶ್ ವರ್ಮಾ, ಸಿರ್ಸಾ, ರವೀಂದ್ರ ಇಂದ್ರರಾಜ್ ಮತ್ತು ಆಶಿಶ್ ಸೂದ್ ಎಂಬ ಮೂವರು ನಾಯಕರ ಹೆಸರುಗಳು ಮಾತ್ರ ಕೇಳಿಬರುತ್ತಿದ್ದವು. ಆದರೆ ಅಂತಿಮವಾಗಿ ಶಾಲಿಮಾರ್ ಬಾಗ್‌ನ ಶಾಸಕಿ ರೇಖಾ ಗುಪ್ತಾ ರ ಹೆಸರನ್ನು ಅಂತಿಮಗೊಳಿಸಲಾಯಿತು ಎಂದು ಹೇಳಲಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BHOOdLNNvmD17cBJslQgwj