ಚಿಕ್ಕಮಗಳೂರು: ಸಚಿವ ಅಶ್ವಥ್ ನಾರಾಯಣರನ್ನ ಬಂಧಿಸಿ, ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹ - Mahanayaka
8:21 PM Wednesday 5 - February 2025

ಚಿಕ್ಕಮಗಳೂರು: ಸಚಿವ ಅಶ್ವಥ್ ನಾರಾಯಣರನ್ನ ಬಂಧಿಸಿ, ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹ

congress
17/02/2023

ಚಿಕ್ಕಮಗಳೂರು: ಮಂಡ್ಯ ಜಿಲ್ಲೆಯಲ್ಲಿ ನಡೆದ ಬಿಜೆಪಿ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯರವರನ್ನು ಹೊಡೆದು ಹಾಕಬೇಕು ಎಂದು ಹೇಳಿರುವ ಉನ್ನತ ಶಿಕ್ಷಣ ಸಚಿವರಾದ ಅಶ್ವತ್ ನಾರಾಯಣ ರವರನ್ನು ಬಂಧಿಸಿ ಕಾನೂನು ರೀತಿ ಕ್ರಮ ಕೈಗೊಳ್ಳಬೇಕೆಂದು ಕಾಂಗ್ರೆಸ್ ಪಕ್ಷದ ಸೇವಾ ದಳದ ಅಧ್ಯಕ್ಷರಾದ ಟಿ.ಎನ್. ಜಗದೀಶ್ ಜಿಲ್ಲೆಯ ತರೀಕೆರೆ ತಾಲೂಕಿನ ಪೊಲೀಸ್ ನಿರೀಕ್ಷಕರಾದ ರವೀಂದ್ರ ಅವರಿಗೆ ದೂರು ನೀಡಿದ್ದಾರೆ.

ದೂರಿನ ಬಳಿಕ ಮಾತನಾಡಿದ ಅವರು, ಸ್ವಾತಂತ್ರ ಹೋರಾಟಗಾರ ಹಾಗೂ ಮೈಸೂರಿನ ಹುಲಿ ಎಂದೇ ಪ್ರಖ್ಯಾತರಾಗಿರುವ ಟಿಪ್ಪು ಸುಲ್ತಾನ್‍ ರವರನ್ನು ಹೊಡೆದು ಹಾಕಿದ ರೀತಿಯೇ ಸಿದ್ದರಾಮಯ್ಯರವರನ್ನು ಹೊಡೆದು ಹಾಕಬೇಕು ಎಂದು ಪ್ರಚೋದನಕಾರಿ ಮತ್ತು ಕೊಲೆ ಬೆದರಿಕೆ ಹೇಳಿಕೆ ನೀಡಿರುವ, ಸಚಿವ ಅಶ್ವಥ್ ನಾರಾಯಣರವರ ಮೇಲೆ ಕಾನೂನು ರೀತಿ ಕ್ರಮ ಜರುಗಿಸಬೇಕು. ಅವರನ್ನ ಬಂಧಿಸಿ ಸೂಕ್ತ ಶಿಕ್ಷೆಗೆ ಗುರಿಪಡಿಸಬೇಕೆಂದು ಆಗ್ರಹಿಸಿದ್ದಾರೆ.

ಈ ಸಂದರ್ಭದಲ್ಲಿ ಕಸಬಾ ಹೋಬಳಿ ಕಾಂಗ್ರೆಸ್ ಅಧ್ಯಕ್ಷರಾದ ವೀರಮಣಿ, ಮಾಜಿ ಪುರಸಭಾ ಸದಸ್ಯರಾದ ಜಯಕುಮಾರ್, ಕಾಂಗ್ರೆಸ್ ಸೇವಾದಳದ ಉಪಾಧ್ಯಕ್ಷರಾದ ದೇವರಾಜ್, ಎನ್.ಎಸ್.ವೈ ಕಾರ್ಯದರ್ಶಿ ರವಿ, ಮಂಜು, ಬರಗೇನಹಳ್ಳಿ ಗ್ರಾಮ ಪಂಚಾಯತಿ ಸದಸ್ಯರಾದ ದಿನೇಶ್, ಮುಂತಾದವರು ಉಪಸ್ಥಿತರಿದ್ದರು.

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LG00SlXNdBFJ1LFb3E40gL

ಯೂಟ್ಯೂಬ್ ಚಾನೆಲ್ ಸಬ್ಸ್ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ