ಕಾಂಗ್ರೆಸ್ ನಿಂದ ಪೊಲೀಸ್ ಇಲಾಖೆಯ ನೈತಿಕ ಸ್ಥೈರ್ಯ ಕುಗ್ಗಿಸುವ ಕೆಲಸ: ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ - Mahanayaka

ಕಾಂಗ್ರೆಸ್ ನಿಂದ ಪೊಲೀಸ್ ಇಲಾಖೆಯ ನೈತಿಕ ಸ್ಥೈರ್ಯ ಕುಗ್ಗಿಸುವ ಕೆಲಸ: ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌

cm bommai
24/05/2023

ಬೆಂಗಳೂರು: ಕಾಂಗ್ರೆಸ್ ನವರು ಪೊಲೀಸ್ ಇಲಾಖೆಯ ನೈತಿಕ ಸ್ಥೈರ್ಯ ಕುಗ್ಗಿಸುವ ಕೆಲಸ ಮಾಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಹೇಳಿದರು.

ಇಂದು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು. ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಯವರು ನಿನ್ನೆ ಸಭೆಯಲ್ಲಿ ಪೊಲೀಸರಿಗೆ ಎಚ್ಚರಿಕೆ ನೀಡಿದ್ದಾರೆ. ಕೇಸರೀಕರಣ ಮಾಡುವ ಅವಕಾಶ ಕೊಡಲ್ಲ ಎಂಬ ಎಚ್ಚರಿಕೆ ನೀಡಿದ್ದಾರೆ. ಇಡೀ ದೇಶದಲ್ಲಿ ಕರ್ನಾಟಕ ಪೊಲೀಸ್ ಉತ್ತಮ ಹೆಸರು ಮಾಡಿದೆ. ನಮ್ಮ‌ ಪೊಲೀಸರು ಕೇಸರಿಕರಣ ಯಾವತ್ತೂ ಮಾಡಿಲ್ಲ ಎಂದರು.

ಕಾಂಗ್ರೆಸ್ ನವರು ಅವರ ಅಜೆಂಡಾ ಜಾರಿ ಮಾಡಲು ಈ ರೀತಿ ತೀರ್ಮಾನ ಮಾಡಿದ್ದಾರೆ. ಇದರಿಂದ ಪೊಲೀಸ್ ಇಲಾಖೆಯ ನೈತಿಕ ಸ್ಥೈರ್ಯ ಕುಗ್ಗಿಸುವ ಕೆಲಸ ಮಾಡಿದ್ದಾರೆ. ರಾಜ್ಯದಲ್ಲಿ ತುಷ್ಟೀಕರಣ ರಾಜಕಾರಣ ಮಾಡಲು ಮೊದಲ ದಿನದಿಂದ ಕಾಂಗ್ರೆಸ್ ಮುಂದಾಗಿದೆ ಎಂದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ