ಹಾಸನದಲ್ಲಿ ಹೆಚ್ಚಾಗುತ್ತಿರುವ ಡೆಂಗ್ಯೂ ಕೇಸ್: ಮೂರು ಮಕ್ಕಳು ಸಾವು

ಹಾಸನ: ಡೆಂಗ್ಯೂ ಜ್ವರಕ್ಕೆ ಹಾಸನ ಜಿಲ್ಲೆಯಲ್ಲಿ 15 ವರ್ಷ ವಯಸ್ಸಿನೊಳಗಿನ ಮೂವರು ಹೆಣ್ಣು ಮಕ್ಕಳು ಬಲಿಯಾಗಿದ್ದು, ಮಕ್ಕಳಲ್ಲೇ ಹೆಚ್ಚಾಗಿ ಡೆಂಗ್ಯೂ ಪತ್ತೆಯಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.
ವರದಿಗಳ ಪ್ರಕಾರ ಹಿಮ್ಸ್ ನಲ್ಲಿ ಡೆಂಗ್ಯೂನಿಂದ ಚಿಕಿತ್ಸೆಗೆ ದಾಖಲಾಗಿರುವ 48 ಮಂದಿಯಲ್ಲಿ 11 ಮಕ್ಕಳಿಗೆ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಜಿಲ್ಲೆಯಲ್ಲಿ ದಿನೇ ದಿನೇ ಡೆಂಗ್ಯೂ ಪೀಡಿತರ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಈವರೆಗೆ ಒಟ್ಟು ನಾಲ್ವರು ಡೆಂಗ್ಯೂಗೆ ಬಲಿಯಾಗಿದ್ದಾರೆ. ರಾಜ್ಯ ಡೆಂಗ್ಯೂ ಡೆತ್ ಆಡಿಟ್ ಸಮಿತಿ ಎರಡು ಸಾವುಗಳನ್ನ ದೃಡಪಡಿಸಿದೆ. ಇದುವರೆಗೆ ಜಿಲ್ಲೆಯಲ್ಲಿ 6,400 ಜನರಿಗೆ ಡೆಂಗ್ಯೂ ಪರೀಕ್ಷೆ ನಡೆಸಲಾಗಿದೆ. ಡೆಂಗ್ಯೂ ನಿಯಂತ್ರಣಕ್ಕೆ ಹಲವು ಕ್ರಮ ಕೈಗೊಂಡ ಬಗ್ಗೆ ಅಧಿಕಾರಿಗಳು ತಿಳಿಸಿದ್ದಾರೆ.
ಹಿಮ್ಸ್ನಲ್ಲಿ 60 ಬೆಡ್ ನ ಮಕ್ಕಳ ಐಸಿಯು ಇದೆ. ನರ್ಸಿಂಗ್ ಸ್ಟಾಫ್ ಕಡಿಮೆ ಇದೆ. ಮಕ್ಕಳ 107 ಬೆಡ್ಗಳ ಪೈಕಿ 100 ಬೆಡ್ ಭರ್ತಿಯಾಗಿದೆ ಎಂದು ಹಾಸನದ ಜಿಲ್ಲಾ ಆರೋಗ್ಯ ಅಧಿಕಾರಿ ಕಚೇರಿಯಲ್ಲಿ ನಡೆಯುತ್ತಿರುವ ಸಭೆಯಲ್ಲಿ ಚರ್ಚಿಸಲಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: