ಉಡುಪಿ: ಅಂಬೇಡ್ಕರ್ ಬಗ್ಗೆ ಅವಹೇಳನಾಕಾರಿ ಕಾಮೆಂಟ್: ಕಿಡಿಗೇಡಿಯ ವಿರುದ್ಧ ಅಂಬೇಡ್ಕರ್ ಸೇನೆ ದೂರು
ಉಡುಪಿ: ಯೂಟ್ಯೂಬ್ ಚಾನೆಲ್ ವೊಂದರ ಸುದ್ದಿಗೆ ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಬಗ್ಗೆ ಅವಹೇಳನಾಕಾರಿಯಾಗಿ ದುಷ್ಕರ್ಮಿಯೋರ್ವ ಕಾಮೆಂಟ್ ಮಾಡಿದ್ದು, ಇದರ ವಿರುದ್ಧ ತಕ್ಷಣವೇ ಕ್ರಮಕೈಗೊಂಡು ಆರೋಪಿಯನ್ನು ಬಂಧಿಸುವಂತೆ ಉಡುಪಿ ಜಿಲ್ಲಾ ಅಂಬೇಡ್ಕರ್ ಸೇನೆ ಗೃಹ ಸಚಿವರಿಗೆ ಮನವಿ ಮಾಡಿದ್ದಾರೆ.
ದಿನಾಂಕ 17-06-2023ರಂದು ಯೂಟ್ಯೂಬ್ ಚಾನೆಲ್ ವೊಂದರಲ್ಲಿ ಸೌಜನ್ಯ ಕೇಸ್ ಗೆ ಸಂಬಂಧಿಸಿದಂತೆ “ಕ್ಷಮಿಸಿ ಬಿಡು ತಂಗಿ! ನ್ಯಾಯ ಸಿಗುವುದೇ? ಎಂಬ ಶೀರ್ಷಿಕೆಯಲ್ಲಿ ಸುದ್ದಿ ಪ್ರಸಾರವಾಗಿತ್ತು. ಈ ಸುದ್ದಿಗೆ “Pereira Mangalore”ಎಂಬ ಐಡಿಯಿಂದ ಕಿಡಿಗೇಡಿಯೊಬ್ಬ ಕಾಮೆಂಟ್ ಮಾಡಿದ್ದು, ಅಂಬೇಡ್ಕರ್ ಅವರ ಬಗ್ಗೆ ನಿಕೃಷ್ಟವಾಗಿ ಕಾಮೆಂಟ್ ಮಾಡಿದ್ದಾನೆ.
ಈ ಬಗ್ಗೆ ಸೂಕ್ತ ತನಿಖೆ ನಡೆಸಿ ಆರೋಪಿ ವಿರುದ್ಧ ಕಾನೂನು ಕ್ರಮಕೈಗೊಳ್ಳಬೇಕು ಎಂದು ಕಾರ್ಕಳ ನಗರ ಠಾಣೆಯಲ್ಲಿ ಇಂದು ಅಂಬೇಡ್ಕರ್ ಸೇನೆ ಮುಖಂಡರು ದೂರು ನೀಡಿದ್ದಾರೆ. ಆರೋಪಿಯನ್ನು ಬಂಧಿಸಿ, ಕಾನೂನು ಕ್ರಮಕೈಗೊಳ್ಳಬೇಕು ಎಂದು ಗೃಹ ಸಚಿವರಿಗೆ ಮನವಿ ಮಾಡಿದ್ದಾರೆ.
ಈ ಸಂದರ್ಭದಲ್ಲಿ ಅಂಬೇಡ್ಕರ್ ಸೇನೆ ಪ್ರಧಾನ ಕಾರ್ಯದರ್ಶಿ ಹರೀಶ್ ಕೊಂಡಾಡಿ, ಜಿಲ್ಲಾ ಗೌರವಾಧ್ಯಕ್ಷ ಸತೀಶ್ ಕುಮಾರ್, ಜಿಲ್ಲಾ ಅಧ್ಯಕ್ಷ ಶಶಿ ಕುಮಾರ್ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw