ದೇಶ ಹಾಳು ಮಾಡಿದವರಿಗೆ ಭಾರತ ರತ್ನ ಪ್ರಶಸ್ತಿ ನೀಡಲಾಗಿದೆ | ನಾಲಿಗೆ ಹರಿಯಬಿಟ್ಟ ನಾರಾಯಣಾಚಾರ್ಯ! - Mahanayaka
1:00 AM Wednesday 11 - December 2024

ದೇಶ ಹಾಳು ಮಾಡಿದವರಿಗೆ ಭಾರತ ರತ್ನ ಪ್ರಶಸ್ತಿ ನೀಡಲಾಗಿದೆ | ನಾಲಿಗೆ ಹರಿಯಬಿಟ್ಟ ನಾರಾಯಣಾಚಾರ್ಯ!

narayanacharya
17/07/2021

ಹುಬ್ಬಳ್ಳಿ: ದೇಶ ಹಾಳು ಮಾಡಿದವರಿಗೆ ಭಾರತ ರತ್ನ ಪ್ರಶಸ್ತಿ ನೀಡಲಾಗಿದೆ ಎಂದು ಡಾ.ಕೆ.ಎಸ್.ನಾರಾಯಣಾಚಾರ್ಯ ವಿವಾದಾತ್ಮಕ ಹೇಳಿಕೆ ನೀಡಿರುವುದು ವರದಿಯಾಗಿದ್ದು,  ಕೊಡಬಾರದವರಿಗೆ ಪ್ರಶಸ್ತಿ ನೀಡಿದರೆ ಅದಕ್ಕೆ ಅರ್ಥವಿಲ್ಲ ಎಂದು ಅವರು ಹೇಳಿರುವ ಬಗ್ಗೆ ವರದಿಯಾಗಿದೆ.

ಬುಕ್ ಬ್ರಹ್ಮ ಹಾಗೂ ಸಾಹಿತ್ಯ ಪ್ರಕಾಶನದ ವತಿಯಿಂದ ಆನ್ ಲೈನ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಈ ಹೇಳಿಕೆಯನ್ನು ಅವರು ನೀಡಿದ್ದಾರೆ ಎಂದು ವರದಿಯಾಗಿದೆ.  “ಈ ಇಳಿಯ ವಯಸ್ಸಿನಲ್ಲಿ ಪ್ರಶಸ್ತಿ ಪಡೆದು ನಾನು ಏನು ಮಾಡೋದು ಎಂದು ಪ್ರಶ್ನಿಸಿದ ಅವರು,  ನಿಮ್ಮ ಪ್ರಶಸ್ತಿಗಳನ್ನು ನೀವೇ ಇಟ್ಟುಕೊಳ್ಳಿ. ಯಾರು ಚೆನ್ನಾಗಿ ಬರೆಯುತ್ತಾರೋ , ಸರಸ್ವತಿ ಆರಾಧನೆಯಲ್ಲಿ ತೊಡಗಿರುತ್ತಾರೋ ಅವರಿಗೆ ನೀಡಿ. ಆಗ ಪ್ರಶಸ್ತಿಗೆ ಅರ್ಥ ಬರುತ್ತದೆ ಎಂದು ಅವರು ಹೇಳಿದರು.

ಇತ್ತೀಚೆಗೆ ಬ್ರಾಹ್ಮಣ, ಸಂಸ್ಕೃತ, ವೇದ, ಉಪನಿಷತ್ ಗಳ ಅವಹೇಳನ ನಡೆಯುತ್ತಿದೆ. ಇದು ಭಾರತೀಯರ ನಾಶಕ್ಕೆ ಮುಹೂರ್ತ ಇಟ್ಟ ಹಾಗೆ ಎಂದೂ ಡಾ.ಕೆ.ಎಸ್.ನಾರಾಯಣಾಚಾರ್ಯ ಹೇಳಿದ್ದಾರೆ ಎಂದು ವರದಿಯಾಗಿದೆ.

ಇನ್ನಷ್ಟು ಸುದ್ದಿಗಳು:

ಬ್ರಾಹ್ಮಣ, ಸಂಸ್ಕೃತ, ವೇದ, ಉಪನಿಷತ್ ಗಳ ಅವಹೇಳನ ಭಾರತೀಯರ ನಾಶಕ್ಕೆ ಮುಹೂರ್ತ ಇಟ್ಟ ಹಾಗೆ | ನಾರಾಯಣಾಚಾರ್ಯ

ಕಂಬಳ ವೀರ ಶ್ರೀನಿವಾಸ್ ಗೌಡಗೆ ಅವಾಚ್ಯ ಶಬ್ಧಗಳಿಂದ ನಿಂದನೆ | ಆರೋಪಿಯ ಬಂಧನಕ್ಕೆ ಹೆಚ್ಚಿದ ಒತ್ತಾಯ

ಅಪ್ರಾಪ್ತೆಗೆ ಮದುವೆಯಾದರೂ ಸಂಬಂಧ ಮುಂದುವರಿಸಿದ ವಿದ್ಯಾರ್ಥಿ | ಪತಿಗೆ ತಿಳಿದಾಗ ನಡೆದದ್ದೇನು ಗೊತ್ತಾ?

ಅಶ್ಲೀಲ ಚಿತ್ರಗಳನ್ನು ವೀಕ್ಷಿಸುತ್ತಿರುವವರಿಗೆ ಬಿಗ್ ಶಾಕ್ ನೀಡಿದ ಪೊಲೀಸರು!

ಇತ್ತೀಚಿನ ಸುದ್ದಿ