ದೇಶದಲ್ಲಿ ಕೊರೊನಾ ಸೋಂಕಿನ ಪ್ರಮಾಣ ಇಳಿಕೆ | ಸಕ್ರಿಯ ಪ್ರಕರಣಗಳ ಸಂಖ್ಯೆಯೂ ಇಳಿಕೆ
ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿನ ಪ್ರಮಾಣ ಗಣನೀಯವಾಗಿ ಇಳಿಕೆಯಾಗಿದ್ದು, ಕಳೆದ 24 ಗಂಟೆಗಳಲ್ಲಿ ಕೇವಲ 25,166 ಸೋಂಕು ಪ್ರಕರಣಗಳು ಮಾತ್ರ ಪತ್ತೆಯಾಗಿವೆ. ಇದು 154 ದಿನಗಳ ನಂತರ ದಾಖಲಾದ ಕಡಿಮೆ ಪ್ರಮಾಣ ಎಂದು ಅಂದಾಜಿಸಲಾಗಿದೆ.
ಕೊವಿಡ್ ನಿಂದಾಗಿ 437 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.ಇದರೊಂದಿಗೆ ಸೋಂಕಿಗೆ ಬಲಿಯಾದವರ ಒಟ್ಟು ಸಂಖ್ಯೆ 4,32 ಲಕ್ಷದ ಗಡಿ ದಾಟಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.
ಸೋಂಕು ಕಡಿಮೆಯಾಗುತ್ತಿದ್ದಂತೆಯೇ ಸಕ್ರಿಯ ಸೋಂಕು ಪ್ರಕರಣಗಳ ಸಂಖ್ಯೆಯಲ್ಲೂ ಭಾರೀ ಇಳಿಕೆಯಾಗಿದೆ. 146 ದಿನಗಳ ನಂತರ ಸಕ್ರಿಯ ಸೋಂಕು ಪ್ರಮಾಣ 3,69,846 ಲಕ್ಷಕ್ಕೆ ಕುಸಿದಿದೆ. ದಿನದ ಕೊರೊನಾ ಪಾಸಿಟಿವಿಟಿ ದರ ಶೇ.1.61 ಇದ್ದರೆ ವಾರದ ಪಾಸಿಟಿವಿಟಿ ರೇಟ್ ಶೇ.1.98ಕ್ಕೆ ಕುಸಿದಿದೆ.
ಇನ್ನಷ್ಟು ಸುದ್ದಿಗಳು…
ಕಮಿಷನರ್ ಗೆ ವಾಯ್ಸ್ ಮೆಸೇಜ್ ಕಳುಹಿಸಿ ಆತ್ಮಹತ್ಯೆಗೆ ಶರಣಾದ ದಂಪತಿ: ಕೊನೆಯ ಸಂದೇಶದಲ್ಲಿತ್ತು ಮನಕಲಕುವ ನೋವು
ಮಂಗಳೂರಿನಲ್ಲಿ 1,725 ಕೆ.ಜಿ. ಅಪಾಯಕಾರಿ ಸ್ಫೋಟಕ ಪತ್ತೆ! | ಆರೋಪಿ ಅರೆಸ್ಟ್
ಗದ್ದೆಗಿಳಿದು ನಾಟಿ ಮಾಡಿದ ಶೋಭಾ ಕರಂದ್ಲಾಜೆ | ಸಾಕು ಬಾರಕ್ಕೋ… ಎಂದ ಕಾರ್ಯಕರ್ತರು!