ದೇಶದಿಂದಲೇ ಬಿಜೆಪಿಯನ್ನು ಕಿತ್ತೊಗೆಯುತ್ತೇವೆ | ತಾಕತ್ ಇದ್ದರೆ ಟಿಎಂಸಿಯನ್ನು ತಡೆಯಿರಿ | ಅಭಿಷೇಕ್ ಬ್ಯಾನರ್ಜಿ ಸವಾಲು
ಕೋಲ್ಕತ್ತಾ: ಬಿಜೆಪಿಯನ್ನು ಇಡೀ ದೇಶದಿಂದಲೇ ನಾವು ಕಿತ್ತೊಗೆಯುತ್ತೇವೆ. ತಾಕತ್ ಇದ್ದರೆ, ಟಿಎಂಸಿಯನ್ನು ತಡೆಯಿರಿ ಎಂದು ಗೃಹ ಸಚಿವ ಅಮಿತ್ ಶಾಗೆ ಟಿಎಂಸಿ ಸಂಸದ ಅಭಿಷೇಕ್ ಬ್ಯಾನರ್ಜಿ ಸವಾಲು ಹಾಕಿದ್ದು, ನಿಮ್ಮಿಂದ ಎಲ್ಲ ರಾಜ್ಯಗಳನ್ನು ಕಿತ್ತುಕೊಳ್ಳುತ್ತೇವೆ ಎಂದು ಹೇಳಿದ್ದಾರೆ.
ಪಶ್ಚಿಮ ಬಂಗಾಳದಲ್ಲಿ ಕಲ್ಲಿದ್ದಲು ಹಗರಣಕ್ಕೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆಯ ಆರೋಪದಲ್ಲಿ ಟಿಎಂಸಿ ಸಂಸದ ಅಭಿಷೇಕ್ ಬ್ಯಾನರ್ಜಿ ಹಾಗೂ ಅವರ ಪತ್ನಿ ರುಜಿರಾ ಬ್ಯಾನರ್ಜಿ ವಿರುದ್ಧ ಇಂದು ಜಾರಿ ನಿರ್ದೇಶನಾಲಯ(ಇಡಿ) ಸಮನ್ಸ್ ಜಾರಿ ಮಾಡಿದೆ. ಈ ಹಿನ್ನೆಲೆಯಲ್ಲಿ ಅವರು ಬಿಜೆಪಿಗೆ ನೇರ ಸವಾಲು ಹಾಕಿದ್ದಾರೆ.
ಇಡಿ ಅಸ್ತ್ರ ಬಳಸಿ ನಮ್ಮನ್ನು ಹೆದರಿಸಬಹುದು ಎಂದು ಬಿಜೆಪಿ ತಿಳಿದುಕೊಂಡಿದ್ದರೆ, ಅದು ಅವರ ತಪ್ಪು ಕಲ್ಪನೆ. ನಮ್ಮ ದೇಹದಲ್ಲಿ ರಕ್ತದ ಕೊನೆಯ ಹನಿ ಇರುವವರೆಗೂ ನಾವು ಬಿಜೆಪಿ ವಿರುದ್ಧ ಹೋರಾಡುತ್ತೇವೆ. ಇದಕ್ಕೆಲ್ಲ ಹೆದರಿ ಸುಮ್ಮನಾಗುವ ಪ್ರಶ್ನೆಯೇ ಇಲ್ಲ ಎಂದು ಅವರು ಹೇಳಿದರು.
ಇದು ನೇತಾಜಿ ಸುಭಾಷ್ ಚಂದ್ರಬೋಸ್, ಸ್ವಾಮಿ ವಿವೇಕಾನಂದ, ರಾಮಕೃಷ್ಣ ಪರಮಹಂಸರು ಬದುಕಿ ಬಾಳಿದ ದೇಶ. ನಾವು ಯಾರಿಗೂ ಹೆದರಿ ಸುಮ್ಮನೆ ಕೂರುವವರಲ್ಲ ಎಂದು ಅಭಿಷೇಕ್ ಬ್ಯಾನರ್ಜಿ ಹೇಳಿದ್ದು, ಬಿಜೆಪಿಯನ್ನು ಕಿತ್ತೊಗೆಯುವವರೆಗೂ ನಾವು ಹೋರಾ ಮಾಡುತ್ತಲೇ ಇರುತ್ತೇವೆ.ಬಿಜೆಪಿಗೆ ತಾಕತ್ ಇದ್ದರೆ ಟಿಎಂಸಿಯನ್ನು ತಡೆಯಲಿದ ಎಂದು ಅವರು ಸವಾಲು ಹಾಕಿದ್ದಾರೆ.
ಇನ್ನಷ್ಟು ಸುದ್ದಿಗಳು…
ಪ್ರೇಯಸಿಯ ತಂದೆಯನ್ನೇ ಕೊಂದಿದ್ದವ ಮೈಸೂರು ವಿದ್ಯಾರ್ಥಿನಿಯ ಅತ್ಯಾಚಾರ ಪ್ರಕರಣ ಆರೋಪಿಗಳಲ್ಲಿ ಓರ್ವ!
ಬಿಜೆಪಿಯ ಕೋಟ್ಯಾಧಿಪತಿ ಸ್ನೇಹಿತರ ಲಾಭಕ್ಕಾಗಿ ವಿವಾದಿತ ಕೃಷಿ ಕಾನೂನು ಜಾರಿ: ಪ್ರಿಯಾಂಕಾ ಗಾಂಧಿ ವಾದ್ರಾ ಆರೋಪ
1,500 ವರ್ಷಗಳ ಹಳೆಯ, ಜೊತೆಯಾಗಿ ಸಮಾಧಿ ಮಾಡಲಾದ ಪ್ರೇಮಿಗಳ ಅಸ್ಥಿಪಂಜರಗಳು ಪತ್ತೆ !
ಕಲಬುರ್ಗಿ ಜಿಲ್ಲೆಯ ಜನರು ಸೋಂಬೇರಿಗಳು ಎಂಬ ತನ್ನ ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಸಚಿವ ಮುರುಗೇಶ್ ನಿರಾಣಿ
ಮಮತಾ ಬ್ಯಾನರ್ಜಿಯನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ ಪ್ರಾಧ್ಯಾಪಕ!
ಬೆತ್ತಲೆ ವಿಡಿಯೋ ಕಾಲ್ ಮಾಡಿದ ಯುವತಿ, ಆಟೋ ಚಾಲಕನನ್ನೂ ಬೆತ್ತಲೆಗೊಳಿಸಿ ವಿಡಿಯೋ ವೈರಲ್ ಮಾಡಿಸಿದಳು!
126 ಪ್ರಯಾಣಿಕರನ್ನು ಹೊತ್ತು ಹಾರುತ್ತಿದ್ದ ವಿಮಾನದ ಪೈಲಟ್ ಗೆ ಹೃದಯಾಘಾತ: ಮುಂದೆ ನಡೆದದ್ದೇನು?