ಡಿ.ದೇವರಾಜ ಅರಸು ಜನ್ಮ ದಿನವನ್ನು ಹಿಂದುಳಿದ ವರ್ಗಗಳ ದಿನಾಚರಣೆಯಾಗಿ ಆಚರಣೆ: ಕೋಟ ಶ್ರೀನಿವಾಸ್ ಪೂಜಾರಿ - Mahanayaka
7:51 PM Thursday 12 - December 2024

ಡಿ.ದೇವರಾಜ ಅರಸು ಜನ್ಮ ದಿನವನ್ನು ಹಿಂದುಳಿದ ವರ್ಗಗಳ ದಿನಾಚರಣೆಯಾಗಿ ಆಚರಣೆ: ಕೋಟ ಶ್ರೀನಿವಾಸ್ ಪೂಜಾರಿ

shrinevas kotta
17/08/2022

ಮಂಗಳೂರು: ಆಗಸ್ಟ್ 20ರಂದು ಮಾಜಿ ಮುಖ್ಯಮಂತ್ರಿ ಹಾಗೂ ಹಿಂದುಳಿದ ವರ್ಗಗಳ ಅಭಿವೃದ್ಧಿಯ ಹರಿಕಾರ ಡಿ. ದೇವರಾಜ ಅರಸು ಅವರ 107ನೇ ಜನ್ಮದಿನಾಚರಣೆಯನ್ನು ಈ ಬಾರಿ ಹಿಂದುಳಿದ ವರ್ಗಗಳ ದಿನಾಚರಣೆ ಎಂದು ಆಚರಿಸಿ ಜಿಲ್ಲಾ ಮಟ್ಟದಲ್ಲಿಯೂ ಪ್ರಶಸ್ತಿ ನೀಡಲಾಗುತ್ತಿದೆ ಎಂದು ಹಿಂದುಳಿದ ವರ್ಗಗಳ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಚಿವರಾದ ಕೋಟ ಶ್ರೀನಿವಾಸ್ ಪೂಜಾರಿ ಅವರು ತಿಳಿಸಿದರು.

ಅವರು ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಈ ಮಾಹಿತಿ ನೀಡಿದರು. ರಾಜ್ಯ ಮಟ್ಟದಲ್ಲಿ ಮಾತ್ರ ಪ್ರತಿ ವರ್ಷ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ದೇವರಾಜ್ ಅರಸು ಅವರ ಹೆಸರಿನಲ್ಲಿ ಪ್ರಶಸ್ತಿ ನೀಡಲಾಗುತ್ತಿತ್ತು.

ಇದೀಗ ಜಿಲ್ಲಾ ಮಟ್ಟದಲ್ಲಿಯೂ ಅವರ ಹೆಸರಿನಲ್ಲಿ ಪ್ರಶಸ್ತಿ ನೀಡಲಾಗುತ್ತಿದೆ, ಆಗಸ್ಟ್ 20 ರಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಅಲ್ಲಿನ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾಡಳಿತದ ವತಿಯಿಂದ ಈ ಪ್ರಶಸ್ತಿಯನ್ನು ನೀಡಲಾಗುವುದು. ಅರ್ಹರನ್ನು ಆಯ್ಕೆ ಮಾಡಲು ಜಿಲ್ಲಾಧಿಕಾರಿಯವರ ನೇತೃತ್ವದಲ್ಲಿ ಆಯ್ಕೆ ಸಮಿತಿಯನ್ನು ರಚಿಸಲಾಗಿದೆ, ಆಯ್ಕೆ ಪ್ರಕ್ರಿಯೆಗಳು ನಡೆಯುತ್ತಿವೆ. ಅದರಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಶಿಕ್ಷಣ ಇಲಾಖೆ, ಹಿಂದುಳಿದ ವರ್ಗಗಳ ಇಲಾಖೆಯ ಅಧಿಕಾರಿ ಹಾಗೂ ಇತರರನ್ನು ಒಳಗೊಂಡಿರುತ್ತದೆ. ಈ ಪ್ರಶಸ್ತಿಯು 50,000 ರೂ. ಗಳ ನಗದು ಒಳಗೊಂಡಿರುತ್ತದೆ ಎಂದರು. ಅರಸು ಅವರ ಜನ್ಮದಿನಾಚರಣೆ ಹಿನ್ನಲೆಯಲ್ಲಿಯೇ ಆ. 20 ರಿಂದ 22 ರವರೆಗೆ ಮೂರು ದಿನಗಳು ಅರಸು ಉತ್ಸವವನ್ನು ನಗರದ ಪುರಭವನದಲ್ಲಿ ಹಮ್ಮಿಕೊಳ್ಳಲಾಗುವುದು,

ಆ.20ರ ಮಧ್ಯಾಹ್ನದಿಂದ ಪ್ರಾರಂಭವಾಗುವ ಈ ಕಾರ್ಯಕ್ರಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವರು ಚಾಲನೆ ನೀಡಲಿದ್ದಾರೆ, ಈ ಉತ್ಸವದಲ್ಲಿ ಹಿಂದುಳಿದ ವರ್ಗಗಳ ವಿವಿಧ ಸಮುದಾಯಗಳಾದ ಕುಲಕಸುಬುಗಾರರಿಂದ ತಯಾರಿಸಿದ ವಸ್ತುಗಳ ಪ್ರದರ್ಶನ ಹಾಗೂ ಮಾರಾಟ ಮಳಿಗೆಯನ್ನು ಸ್ಥಾಪಿಸಲಾಗುತ್ತದೆ ಹಾಗೂ ವೈವಿದ್ಯಮಯ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು ಎಂದು ಅವರು ಮಾಹಿತಿ ನೀಡಿದರು. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್ ಮತ್ತು ಮುಖಂಡ ಆರ್.ಸಿ. ನಾರಾಯಣ್ ಗೋಷ್ಠಿಯಲ್ಲಿದ್ದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ