ದೇವಸ್ಥಾನದಿಂದ ಬರುತ್ತಿದ್ದ ಮಹಿಳೆಯನ್ನು ಹೊತ್ತೊಯ್ದು ಸಾಮೂಹಿಕ ಅತ್ಯಾಚಾರ! - Mahanayaka

ದೇವಸ್ಥಾನದಿಂದ ಬರುತ್ತಿದ್ದ ಮಹಿಳೆಯನ್ನು ಹೊತ್ತೊಯ್ದು ಸಾಮೂಹಿಕ ಅತ್ಯಾಚಾರ!

shahapura
10/08/2021

ಯಾದಗಿರಿ: ದೇವಸ್ಥಾನದಿಂದ ತನ್ನ ಸಂಬಂಧಿಯೊಂದಿಗೆ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಮಹಿಳೆಯೊಬ್ಬರನ್ನು ಅಡ್ಡಗಟ್ಟಿದ ಆರೋಪಿಗಳು ಸಂಬಂಧಿಗೆ ಹಿಗ್ಗಾಮುಗ್ಗಾ ಥಳಿಸಿ ಮಹಿಳೆಯನ್ನು ಹೊತ್ತೊಯ್ದು ಸಾಮೂಹಿಕ ಅತ್ಯಾಚಾರ ನಡೆಸಿದ ಅಮಾನವೀಯ ಘಟನೆ ಶಹಾಪೂರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಆಗಸ್ಟ್ 8ರಂದು ಈ ಘಟನೆ ನಡೆದಿದೆ ಎಂದು ಹೇಳಲಾಗಿದೆ. ಆದರೆ ತಡವಾಗಿ ಬೆಳಕಿಗೆ ಬಂದಿದೆ. ಸಂತ್ರಸ್ತ ಮಹಿಳೆ ಹಾಗೂ ಆಕೆಯ ಸಂಬಂಧಿಕ ದೇವಸ್ಥಾನಕ್ಕೆ ತೆರಳಿ ತಡರಾತ್ರಿ ಬೈಕ್ ನಲ್ಲಿ ಮನೆಗೆ ತೆರಳುತ್ತಿದ್ದರು ಎನ್ನಲ್ಲಾಗಿದ್ದು, ಈ ವೇಳೆ ಮದ್ಯದ ಅಮಲಿನಲ್ಲಿದ್ದ ಇಬ್ಬರು ದುಷ್ಕರ್ಮಿಗಳು ಇವರನ್ನು ಆಟೋ ಮೂಲಕ ಹಿಂಬಾಲಿಸಿದ್ದಾರೆ.

ಯಾದಗಿರಿ ಶಹಾಪುರ ಮಾರ್ಗ ಮಧ್ಯದಲ್ಲಿ ಬೈಕ್ ಗೆ ಆಟೋವನ್ನು ಅಡ್ಡ ನಿಲ್ಲಿಸಿದ್ದು, ಮಹಿಳೆಯನ್ನು ಹೊತ್ತೊಯ್ಯಲು ಯತ್ನಿಸಿದ್ದಾರೆ. ಈ ವೇಳೆ ಜೊತೆಗಿದ್ದ ಸಂಬಂಧಿಕ ತಡೆಯಲು ಮುಂದಾದಾಗ ಆತನಿಗೆ ಹಿಗ್ಗಾಮುಗ್ಗಾ ಥಳಿಸಿ ಮಹಿಳೆಯನ್ನು ಹೊತ್ತೊಯ್ದು ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ ಎಂದು ವರದಿಯಾಗಿದೆ.

ಆಗಸ್ಟ್ 8ರ ಮಧ್ಯರಾತ್ರಿಯಿಂದ ಆಗಸ್ಟ್ 9ರ ಬೆಳಗಿನ ಜಾವದ ಅವಧಿಯಲ್ಲಿ ಈ ಘಟನೆ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ಸಂತ್ರಸ್ತೆಯ ಸಂಬಂಧಿ ನೀಡಿದ ದೂರಿನನ್ವಯ ಇಬ್ಬರು ಆರೋಪಿಗಳನ್ನು ಪತ್ತೆ ಹಚ್ಚಿರುವ ಪೊಲೀಸರು ಬಂಧಿಸಿದ್ದಾರೆ. ಇನ್ನೂ ಕೃತ್ಯಕ್ಕೆ ಬಳಸಿಕೊಂಡಿರುವ ಆಟೋವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಇನ್ನಷ್ಟು ಸುದ್ದಿಗಳು…

ನಿರ್ಜನ ಪ್ರದೇಶದಲ್ಲಿ ಮಹಿಳೆಯ ಮೇಲೆ ಕಾರಿನಲ್ಲೇ ಅತ್ಯಾಚಾರ | ಬಾಡಿಗೆ ಮನೆ ಮಾಲಿಕನಿಂದ ಕೃತ್ಯ

ಮತ್ತು ಬರುವ ಔಷಧಿ ನೀಡಿ ಮಹಿಳಾ ಪೊಲೀಸ್ ಮೇಲೆ ಸಬ್ ಇನ್ಟ್ ಪೆಕ್ಟರ್ ನಿಂದ ಅತ್ಯಾಚಾರ

ಕೇವಲ 11 ನಿಮಿಷ ಮಾತ್ರ ರೇಪ್ ಆಗಿದೆ ಎಂದು ಶಿಕ್ಷೆ ಕಡಿಮೆ ಮಾಡಿ ತೀರ್ಪು ನೀಡಿದ ನ್ಯಾಯಾಧೀಶ!

ಪ್ರಾಜೆಕ್ಟ್ ವರ್ಕ್ ನೆಪದಲ್ಲಿ ಮನೆಗೆ ಕರೆಸಿ ವಿದ್ಯಾರ್ಥಿನಿಯ ಮೇಲೆ ಶಿಕ್ಷಕನಿಂದ ಅತ್ಯಾಚಾರ, ಬ್ಲ್ಯಾಕ್ ಮೇಲ್

ಡಯಾಲಿಸಿಸ್ ಗಾಗಿ ಆಸ್ಪತ್ರೆಗೆ ಬಂದಿದ್ದ ಮಹಿಳೆಯ ಮೇಲೆ ವಾರ್ಡ್ ಬಾಯ್ ನಿಂದ ಅತ್ಯಾಚಾರ!

ಆಟವಾಡುವ ನೆಪದಲ್ಲಿ ಬಾಲಕಿಯನ್ನು ಕರೆದೊಯ್ದು ಅತ್ಯಾಚಾರ!

ಇತ್ತೀಚಿನ ಸುದ್ದಿ