ದೇವಸ್ಥಾನಕ್ಕೆ ಆಗಮಿಸಿದ್ದ ಗರ್ಭಿಣಿ ಕುಸಿದು ಬಿದ್ದು ಸಾವು - Mahanayaka
11:11 AM Wednesday 12 - March 2025

ದೇವಸ್ಥಾನಕ್ಕೆ ಆಗಮಿಸಿದ್ದ ಗರ್ಭಿಣಿ ಕುಸಿದು ಬಿದ್ದು ಸಾವು

pankaja
05/03/2022

ಮಳವಳ್ಳಿ: ತಾಲೂಕಿನ ತೆಂಕಹಳ್ಳಿ ಸಮೀಪದ ಶನೈಶ್ಚರಸ್ವಾಮಿ ದೇವಸ್ಥಾನಕ್ಕೆ ಆಗಮಿಸಿದ್ದ ತುಂಬು ಗರ್ಭಿಣಿಯೊಬ್ಬಳು ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ನಡೆದಿದೆ.

ತಿ.ನರಸೀಪುರ ತಾಲೂಕಿನ ಕಟ್ಟೇಪುರ ಗ್ರಮದ ಉಮೇಶ್‌ ಎಂಬವರ ಪತ್ನಿ ಪಂಕಜಾ (26) ಮೃತ ಗರ್ಭಿಣಿ. ಇವರು ಇತ್ತೀಚೆಗೆ ಮನಸಿಕ ಖಿನ್ನತೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ.

ಈ ಹಿನ್ನಲೆಯಲ್ಲಿ ಸಂಬಂಧಿಕರ ಸಲಹೆಯಂತೆ ತೆಂಕಹಳ್ಳಿ ಸಮೀಪದ ಶನೈಶ್ಚರಸ್ವಾಮಿ ದೇವಸ್ಥಾನಕ್ಕೆ ಪತಿ ಉಮೇಶ್‌ ಕುಟುಂಬದವರ ಜೊತೆ ಕಾರಿನಲ್ಲಿ ಆಗಮಿಸಿದ್ದರು.


Provided by

ದೇವಸ್ಥಾನದಲ್ಲಿ ಪೂಜೆ ಮುಗಿಸಿ ಹಿಂದಿರುಗುತ್ತಿದ್ದ ವೇಳೆ ಪ್ರಜ್ಞೆ ತಪ್ಪಿ ಕುಸಿದುಬಿದ್ದಿದ್ದಾರೆ. ತಕ್ಷಣ ಅವರನ್ನು ತಲಕಾಡು ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಘಟನೆ ಸಂಬಂಧ ಬೆಳಕವಾಡಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ದರೋಡೆ ಯತ್ನ: ಮೂವರು ಆರೋಪಿಗಳ ಬಂಧನ

ಸಾಮಾಜಿಕ ಹೋರಾಟಗಾರ, ನಟ ಚೇತನ್‌ ಗೆ ನೀಡಿದ್ದ ಗನ್‌ ಮ್ಯಾನ್ ಹಿಂಪಡೆದ ಸರಕಾರ

ಮೀನು ವ್ಯಾಪಾರಿ ಮೇಲೆ ತಲವಾರಿನಿಂದ ದಾಳಿ: 2 ಲಕ್ಷ ರೂ. ನಗದು ದರೋಡೆ

ಉಕ್ರೇನ್‌ ನಲ್ಲಿ ರಷ್ಯಾದಿಂದ ತಾತ್ಕಾಲಿಕ ಕದನ ವಿರಾಮ ಘೋಷಣೆ

ಕಾಲೇಜಿನಿಂದ ಡಿಬಾರ್: 5ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ

ಇತ್ತೀಚಿನ ಸುದ್ದಿ