ದೇವಸ್ಥಾನದ ಆವರಣದಲ್ಲಿ ಚಪ್ಪಲಿ ಧರಿಸಿ ಓಡಾಡಿದ ಯುವಕರ ಬಂಧನ!
ಮಂಗಳೂರು: ದೇವಸ್ಥಾನದ ಆವರಣದಲ್ಲಿ ಚಪ್ಪಲಿ ಧರಿಸಿ ಓಡಾಡಿದ ಆರೋಪದಲ್ಲಿ ನಾಲ್ವರು ಯುವಕರನ್ನು ಪೂಂಜಾಲಕಟ್ಟೆ ಪೊಲೀಸರು ಬಂಧಿಸಿದ್ದು, ದೇವಸ್ಥಾನದ ಆವರಣದಲ್ಲಿ ಚಪ್ಪಲಿ ಹಾಕಿಕೊಂಡು ಹೋಗಿ ದೇವಸ್ಥಾನದ ಪಾವಿತ್ರ್ಯತೆಗೆ ಧಕ್ಕೆ ತರಲಾಗಿದೆ ಎಂದು ಆರೋಪಿಸಲಾಗಿದೆ.
ಉಳ್ಳಾಲದ ಬುಶೇರ್ ರೆಹಮಾನ್(20), ಇಸ್ಮಾಯಿಲ್ ಅರ್ಹ ಮಾಜ್ (22), ಮಹಮ್ಮದ್ ತಾನಿಶ್ (19), ಮೊಹಮ್ಮದ್ ರಶಾದ್(19) ಬಂಧಿತರು ಎಂದು ವರದಿಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಶ್ರೀ ಕಾರಿಂಜೇಶ್ವರ ದೇವಸ್ಥಾನದಲ್ಲಿ ಈ ಘಟನೆ ನಡೆದಿದ್ದು, ಯುವಕರು ದೇವಸ್ಥಾನದ ಆವರಣ ಹಾಗೂ ಗರ್ಭಗುಡಿಯ ಆವರಣದಲ್ಲಿ ಚಪ್ಪಲಿ ಹಾಕಿಕೊಂಡು ಓಡಾಡುತ್ತಿರುವ ವಿಡಿಯೋ ವೈರಲ್ ಆದ ಬಳಿಕ ಈ ಕ್ರಮಕೈಗೊಳ್ಳಲಾಗಿದೆ ಎಂದು ತಿಳಿದು ಬಂದಿದೆ.
ವಿಡಿಯೋ ವೈರಲ್ ಆದ ಬೆನ್ನಲ್ಲೇ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಪೊಲೀಸರಿಗೆ ಸೂಚನೆ ನೀಡಿದ್ದರು ಎಂದು ಹೇಳಲಾಗಿದ್ದು. ಸದ್ಯ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ. ಯುವಕರ ಕೃತ್ಯ ಉದ್ದೇಶ ಪೂರ್ವಕವೋ ಅಥವಾ ದೇವಸ್ಥಾನದ ನಿಯಮಗಳು ತಿಳಿಯದೇ ಆಗಿರುವ ಪ್ರಮಾದವೋ ತಿಳಿದು ಬಂದಿಲ್ಲ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka