ಆಸ್ಪತ್ರೆಗೆ ದಾಖಲಾದ ಜೆಡಿಎಸ್ ವರಿಷ್ಠ  ಹೆಚ್.ಡಿ.ದೇವೇಗೌಡ ಮತ್ತು ಅವರ ಪತ್ನಿ ಚೆನ್ನಮ್ಮ!

hd devegowda
31/03/2021

ಬೆಂಗಳೂರು: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರು ಹಾಗೂ ಅವರ ಪತ್ನಿ ಚೆನ್ನಮ್ಮ ಅವರಿಗೆ ಕೊರೊನಾ ಪಾಸಿವ್ ರಿಪೋರ್ಟ್ ಬಂದಿದ್ದು, ಇದರಿಂದಾಗಿ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ.

ದೇವೇಗೌಡರು ಹಾಗೂ  ಚೆನ್ನಮ್ಮ ಅವರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದ್ದು, ಈ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ಸದ್ಯ ಅವರು ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವರದಿಯಾಗಿದೆ.

ನಾನು ಮತ್ತು ನನ್ನ ಪತ್ನಿ ಚೆನ್ನಮ್ಮಗೆ ಕೊವಿಡ್ ಪಾಸಿಟಿವ್ ಬಂದಿದ್ದು, ನಮ್ಮ ಕುಟುಂಬದ ಸದಸ್ಯರಿಂದ ಸ್ವಯಂ ಆಗಿ  ಪ್ರತ್ಯೇಕವಾಗಿರುತ್ತೇವೆ. ಕಳೆದ ಕೆಲವು ದಿನಗಳಿಂದ ನಮ್ಮೊಂದಿಗೆ ಸಂಪರ್ಕಕ್ಕೆ ಬಂದವರೆಲ್ಲರೂ ಕೊವಿಡ್ ಪರೀಕ್ಷೆಗೆ ಒಳಪಡುವಂತೆ ಮನವಿ ಮಾಡುತ್ತಿದ್ದೇವೆ. ಪಕ್ಷದ ಕಾರ್ಯಕರ್ತರು ಮತ್ತು ಹಿತೈಷಿಗಳು ಭಯಭೀತರಾಗದಂತೆ ನಾನು ವಿನಂತಿಸುತ್ತೇನೆ ಎಂದು ದೇವೇಗೌಡರು ಟ್ವೀಟ್ ಮಾಡಿದ್ದಾರೆ.

ಮುಂದಿನ 2 ದಿನಗಳಲ್ಲಿ ಈ 6 ಜಿಲ್ಲೆಗಳಲ್ಲಿ ಮಳೆಯಾಗಲಿದೆ

ಇತ್ತೀಚಿನ ಸುದ್ದಿ

Exit mobile version