ದೇವೇಗೌಡರ ಹೇಳಿಕೆಯ ಬೆನ್ನಲ್ಲೇ ಬೇರೆಯೇ ಹೇಳಿಕೆ ನೀಡಿದ ಕುಮಾರಸ್ವಾಮಿ
14/02/2021
ಬೆಂಗಳೂರು: ಉಪ ಚುನಾವಣೆಯಲ್ಲಿ ಜೆಡಿಎಸ್ ಸ್ಪರ್ಧಿಸುವುದಿಲ್ಲ ಎಂದು ಜೆಡಿಎಸ್ ವರಿಷ್ಠ ದೇವೇಗೌಡ ಹೇಳಿಕೆ ನೀಡಿದ ಬೆನ್ನಲ್ಲೇ ಇದೀಗ ಕುಮಾರಸ್ವಾಮಿ ಬೇರೆಯದ್ದೇ ಹೇಳಿಕೆ ನೀಡಿದ್ದು, ಮಸ್ಕಿ, ಸಿಂದಗಿ ಹಾಗೂ ಬಸವ ಕಲ್ಯಾಣ ಕ್ಷೇತ್ರಗಳಲ್ಲಿ ಜೆಡಿಎಸ್ ಸ್ಪರ್ಧಿಸಲಿದೆ ಎಂದು ಅವರು ತಿಳಿಸಿದ್ದಾರೆ.
ಅರಮನೆ ಮೈದಾನದಲ್ಲಿ ಭಾನುವಾರ ನಡೆದ ಜೆಡಿಎಸ್ ಪಕ್ಷ ಸಂಘಟನೆ ಸಮಾವೇಶ ಮತ್ತು ಗ್ರಾಪಂ ನೂತನ ಸದಸ್ಯರಿಗೆ ಅಭಿನಂದನಾ ಸಮಾರಂಭದಲ್ಲಿ ಕುಮಾರಸ್ವಾಮಿ ಅವರು ಈ ಬಗ್ಗೆ ಮಾತನಾಡಿದ್ದಾರೆ.
ಆರ್ಥಿಕ ಪರಿಸ್ಥಿತಿಯ ಕಾರಣದಿಂದ ಸಿಂದಗಿ, ಬಸವ ಕಲ್ಯಾಣ, ಮಸ್ಕಿ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಜೆಡಿಎಸ್ ನಿಂದ ಅಭ್ಯರ್ಥಿಗಳನ್ನು ಕಣಕ್ಕಿಳಿಸುವುದಿಲ್ಲ ಎಂದು ದೇವೇಗೌಡರು ಹೇಳಿದ್ದರು. ಆದರೆ ಕಾರ್ಯಕರ್ತರ ಒತ್ತಾಯಕ್ಕೆ ಮಣಿದು ಈ ಮೂರು ಕ್ಷೇತ್ರದಲ್ಲೂ ಅಭ್ಯರ್ಥಿಗಳನ್ನು ಹಾಕುತ್ತೇವೆ. ಈ ಕುರಿತು ದೇವೇಗೌಡರ ಅನುಮತಿ ಪಡೆದುಕೊಂಡೇ ಮುಂದುವರಿಯಲಾಗುತ್ತಿದೆ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.