ರಜನಿ ಪುತ್ರಿ ಐಶ್ವರ್ಯಾ ಜೊತೆಗಿನ 18 ವರ್ಷಗಳ ದಾಂಪತ್ಯಕ್ಕೆ ವಿದಾಯ ಹೇಳಿದ ನಟ ಧನುಷ್

dhanush aishwaryaa
18/01/2022

ಚೆನ್ನೈ: ಸೂಪರ್ ಸ್ಟಾರ್ ರಜನಿಕಾಂತ್ ಪುತ್ರಿ ಐಶ್ವರ್ಯ ಹಾಗೂ ತಮಿಳು ಖ್ಯಾತ ನಟ ಧನುಷ್ ತಮ್ಮ 18 ವರ್ಷಗಳ ದಾಂಪತ್ಯ ಜೀವನಕ್ಕೆ ವಿದಾಯ ಹೇಳಿದ್ದಾರೆ.

ಈ ವಿಚಾರವನ್ನು ಸ್ವತಃ ಧನುಷ್ ಸೋಮವಾರ ರಾತ್ರಿ ಟ್ವೀಟ್ ಮಾಡಿದ್ದು, ಅಭಿಮಾನಿಗಳು ಅಚ್ಚರಿಗೊಂಡಿದ್ದಾರೆ. ಧನುಷ್ ಮಾಡಿರುವ ಟ್ವೀಟ್ ನಲ್ಲಿ, 18 ವರ್ಷಗಳ ಕಾಲ ಸ್ನೇಹಿತರಂತೆ, ದಂಪತಿಯಂತೆ, ಪೋಷಕರಂತೆ ಮತ್ತು ಪರಸ್ಪರ ಹಿತೈಷಿಗಳಾಗಿದ್ದೆವು. ನಮ್ಮ ಪ್ರಯಾಣವು ಬೆಳವಣಿಗೆ, ತಿಳುವಳಿಕೆ, ಹೊಂದಾಣಿಕೆ ಮತ್ತು ಹೊಂದಿಕೊಳ್ಳುವಿಕೆಯಿಂದ ಕೂಡಿದೆ. ಇಂದು ನಮ್ಮ ಮಾರ್ಗಗಳನ್ನು ಬೇರೆ ಮಾಡಿಕೊಳ್ಳುವ ಜಾಗದಲ್ಲಿ ಬಂದು ನಿಂತಿದ್ದೇವೆ. ಐಶ್ವರ್ಯಾ ಮತ್ತು ನಾನು ಬೇರೆಯಾಗಲು ನಿರ್ಧರಿಸಿದ್ದೇವೆ. ದಯವಿಟ್ಟು ನಮ್ಮ ನಿರ್ಧಾರವನ್ನು ಗೌರವಿಸಿ ಮತ್ತು ನಮ್ಮ ಖಾಸಗಿತನಕ್ಕೆ ಗೌರವ ನೀಡಿ ಎಂದು ಬರೆದುಕೊಂಡಿದ್ದಾರೆ.

ಈ ಟ್ವೀಟ್ ನ್ನು ಐಶ್ವರ್ಯಾ ಕೂಡ ಶೇರ್‍ ಮಾಡಿದ್ದು, ಇದಕ್ಕೆ ಯಾವುದೇ ಕ್ಯಾಪ್ಷನ್ ಬೇಕಾಗಿಲ್ಲ. ನಮ್ಮ ತಿಳುವಳಿಕೆ ಮತ್ತು ಪ್ರೀತಿ ಮಾತ್ರ ಅಗತ್ಯ ಎಂದು ಬರೆದುಕೊಂಡಿದ್ದಾರೆ. ಐಶ್ವರ್ಯಾ ಮತ್ತು ಧನುಷ್ ಗೆ ಯಾತ್ರ ರಾಜ ಮತ್ತು ಲಿಂಗ ರಾಜ ಎಂಬ ಇಬ್ಬರು ಮಕ್ಕಳಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಆರ್ ಟಿಐ ಕಾರ್ಯಕರ್ತನಿಂದ ಮಹಿಳೆಗೆ ಲೈಂಗಿಕ ಕಿರುಕುಳ

ಪತಿ ಹಾಗೂ ಆತನ ನಾಲ್ವರು ಸ್ನೇಹಿತರ ವಿರುದ್ಧ ಅತ್ಯಾಚಾರದ ದೂರು ದಾಖಲಿಸಿದ ಮಹಿಳೆ

ಆರೋಗ್ಯದ ಜೊತೆಗೆ ಚರ್ಮದ ಕಾಂತಿಗೆ ಬೀಟ್ರೂಟ್ ಸೇವನೆ ಉತ್ತಮ

ವಿಮಾನ ನಿಲ್ದಾಣ ಸಮೀಪ ಮೂರು ತೈಲ ಟ್ಯಾಂಕರ್‌ ಗಳ ಸ್ಫೋಟ

ಇತ್ತೀಚಿನ ಸುದ್ದಿ

Exit mobile version