ರಾತ್ರಿಯಾದ್ರೂ ಠಾಣೆ ಮುಂಭಾಗದಿಂದ ಕದಲದ ಪ್ರತಿಭಟನಾಕಾರರು: ಧರ್ಮಸ್ಥಳ ಪೊಲೀಸ್ ಠಾಣೆ ಚಲೋ
ಬೆಳ್ತಂಗಡಿ: ಶಿಬಾಜೆಯ ದಲಿತ ಯುವಕನ ಕೊಲೆ ಪ್ರಕರಣದ ಸಮಗ್ರ ತನಿಖೆಗೆ ಒತ್ತಾಯಿಸಿ ನಡೆಯುತ್ತಿರುವ ದಲಿತ ಸಂಘಟನೆಗಳ ಪ್ರತಿಭಟನೆ ನಿರಂತರ ಮುಂದುವರಿದಿದೆ.
ಸ್ಥಳಕ್ಕೆ ಎಸ್.ಪಿ ಆಗಮಿಸಬೇಕು ಶಿಬಾಜೆ ಗ್ರಾಮಪಂಚಾಯತು ಅಧ್ಯಕ್ಷನ ವಿರುದ್ದ ಎಫ್.ಐ.ಆರ್ ದಾಖಲಿಸಬೇಕು ಎಂಬ ಬೇಡಿಕೆಗಳು ಈಡೇರದ ಹಿನ್ನೆಲೆಯಲ್ಲಿ ಪ್ರತಿಭಟನಾಕಾರರು ಪ್ರತಿಭಟನೆಯನ್ನು ಹಿಂಪಡೆಯಲು ನಿರಾಕರಿಸಿದ್ದು ಠಾಣೆಯ ಎದುರು ಪ್ರತಿಭಟನೆ ಮುಂದುವರಿಸಿದ್ದಾರೆ.
ತಮ್ಮ ಬೇಡಿಕೆ ಈಡೇರದ ಹೊರತು ಪ್ರತಿಭಟನೆ ಹಿಂಪಡೆಯುವುದಿಲ್ಲ ಎಂದು ಮಹಿಳೆಯರು ಮಕ್ಕಳು ಸೇರಿದಂತೆ ಪ್ರತಿಭಟನಾ ಕಾರರು ಬೆಳಗ್ಗಿನಿಂದ ಧರಣಿ ಮುಂದುವರಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LG00SlXNdBFJ1LFb3E40gL
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw