ಸ್ವ–ಸಹಾಯ ಸಂಘದ ಸಾಲ ಕಟ್ಟುವ ವಿಚಾರವಾಗಿ ಬೆದರಿಕೆ: ಸದಸ್ಯನ ಆತ್ಮಹತ್ಯೆಗೆ ಕಾರಣವಾದ ಆರೋಪಿಯ ಬಂಧನ

ಸ್ವ–ಸಹಾಯ ಸಂಘದ ಸಾಲ ಕಟ್ಟುವ ವಿಚಾರವಾಗಿ ಬೆದರಿಕೆ ಹಾಕಿ ಓರ್ವನ ಸಾವಿಗೆ ಕಾರಣವಾದ ಪ್ರಕರಣ ಕ್ಕೆ ಸಂಬಂಧಪಟ್ಟಂತೆ ಒಬ್ಬ ಆರೋಪಿಯನ್ನು ಸೋಮವಾರ ಬಂಧಿಸಲಾಗಿದೆ.
ಬೆಳ್ತಂಗಡಿ ತಾಲೂಕಿನ ತೋಟತ್ತಾಡಿ ಗ್ರಾಮದ ನೆಲ್ಲಿಗುಡ್ಡೆ ನಿವಾಸಿ ಚಂದ್ರಶೇಖರ್ (24) ಎಂಬವರಿಗೆ ಸಂಘದ ಸಾಲ ಕಟ್ಟುವ ವಿಚಾರದಲ್ಲಿ ಅದೇ ಸಂಘದ ನಾಲ್ಕು ಜನ ಬೆದರಿಕೆ ಹಾಕಿದ ಕಾರಣ ಆ. 25ರಂದು ಆತ್ಮಹತ್ಯೆಗೆ ಯತ್ನಿಸಿದ್ದು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಸೆ. 23ರಂದು ಚಿಕಿತ್ಸೆ ಸ್ಪಂದಿಸದೆ ಸಾವನ್ನಪ್ಪಿದ್ದು ಈ ಬಗ್ಗೆ ಮನೆಯವರು ಧರ್ಮಸ್ಥಳ ಠಾಣೆಯಲ್ಲಿ ನಾಲ್ವರ ಮೇಲೆ ದೂರು ದಾಖಲಿಸಿದ್ದರು.
ಇದೀಗ ಪ್ರಕರಣದ ಓರ್ವ ಆರೋಪಿ ಎಂದು ಹೇಳಲಾದ ತೋಟತ್ತಾಡಿ ಗ್ರಾಮದ ಯೋಗೀಶ್ (34) ಎಂಬಾತನನ್ನು ಧರ್ಮಸ್ಥಳದ ಪಿ ಎಸ್ ಐ ಅನಿಲ್ ಕುಮಾರ್ ಅವರ ತಂಡ ಬಂಧಿಸಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದೆ.
ಆರೋಪಿಗೆ 14 ದಿನಗಳ ನ್ಯಾಯಾಂಗ ವಿಧಿಸಲಾಗಿದೆ ಎಂದು ತಿಳಿದುಬಂದಿದೆ.ಉಳಿದ ಆರೋಪಿಗಳ ಬಂಧನಕ್ಕೆ ಧರ್ಮಸ್ಥಳ ಪೊಲೀಸರು ಬಲೆ ಬೀಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/GoQnwP3qNkmAbAPcjb8n8F
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka