ನಾಪತ್ತೆಯಾಗಿರುವ ಈ ಯುವಕನ ಬಗ್ಗೆ ಮಾಹಿತಿ ಸಿಕ್ಕಿದರೆ ಪೊಲೀಸರಿಗೆ ಮಾಹಿತಿ ನೀಡಿ!

missing
05/09/2022

ಬೆಳ್ತಂಗಡಿ: ಯುವಕನೊಬ್ಬ ನಾಪತ್ತೆಯಾಗಿರುವ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು , ಯುವಕನ ಬಗ್ಗೆ ಮಾಹಿತಿ ಸಿಕ್ಕಿದ್ದಲ್ಲಿ ಧರ್ಮಸ್ಥಳ ಪೊಲೀಸರಿಗೆ ಅಥವಾ ಪೊಲೀಸ್ ನಿಯಂತ್ರಣ ಕೊಠಡಿಗೆ ಮಾಹಿತಿ ನೀಡಬೇಕಾಗಿ ಪೊಲೀಸರು ಪ್ರಕಟಣೆ ನೀಡಿದ್ದಾರೆ.

ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ಕನ್ಯಾಡಿ-2 ನೇರೊಳ್ ಪಲ್ಕೆ ಮನೆಯ ಮುರಳೀಧರ್ ಎಂಬವರ ಮಗನಾದ 21 ವರ್ಷದ ಕೌಶಿಕ್ ಕೆ. ಕಳೆದ ವಾರ ಮನೆಯಿಂದ ಏಕಾಏಕಿ  ನಾಪತ್ತೆಯಾಗಿದ್ದಾನೆ. ಮನೆಯವರು ಎಲ್ಲಾ ಕಡೆ ಹುಡುಕಾಟ ನಡೆಸಿದರೂ ಸುಳಿವು ಸಿಕ್ಕಿಲ್ಲ ಇದರಿಂದ ಧರ್ಮಸ್ಥಳ ಪೊಲೀಸ್ ಠಾಣೆಗೆ  ನಾಪತ್ತೆಯಾಗಿರುವ ಬಗ್ಗೆ ದೂರು ನೀಡಿದ್ದಾರೆ.

ಕೌಶಿಕ್ ಮಂಗಳೂರಿನ ಕೆ.ಪಿ.ಟಿ. ಕಾಲೇಜಿನಲ್ಲಿ ವಿದ್ಯಾಭ್ಯಾಸವನ್ನು ಮಾಡುತ್ತಿದ್ದು, ಮನೆಯಿಂದ ಮಂಗಳೂರಿನ ಕೆ.ಪಿ.ಟಿ ಕಾಲೇಜಿಗೆ ಹೋಗಿ ಬರುತ್ತಿದ್ದ. ಕೌಶಿಕ್ ಬಗ್ಗೆ ಮಾಹಿತಿ ಸಿಕ್ಕಿದ್ದಲ್ಲಿ ಪೊಲೀಸರಿಗೆ ಮಾಹಿತಿ ನೀಡಲು ಲುಕ್ ಔಟ್ ನೋಟೀಸ್ ಪ್ರಕಟನೆ ಹೊರಡಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/HeAiP3WAQfT6ajtrJVJ4kP

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ

Exit mobile version