ಧಾರ್ಮಿಕ ಬಲಾತ್ಕಾರ:  ಚರ್ಚ್ ಗೆ ನುಗ್ಗಿ ದುರ್ನಡತೆ ತೋರಿದ ಬಿಜೆಪಿ ಪರಿವಾರ - Mahanayaka
7:13 AM Thursday 16 - October 2025

ಧಾರ್ಮಿಕ ಬಲಾತ್ಕಾರ:  ಚರ್ಚ್ ಗೆ ನುಗ್ಗಿ ದುರ್ನಡತೆ ತೋರಿದ ಬಿಜೆಪಿ ಪರಿವಾರ

bjp parivar
18/10/2021

ಹುಬ್ಬಳ್ಳಿ: ರಾಜ್ಯದಲ್ಲಿ ಸರ್ಕಾರ ಅನ್ನೋದು ಇದೆಯಾ ಎಂದು ಜನರು ಪ್ರಶ್ನೆ ಮಾಡುವ ಮಟ್ಟಕ್ಕೆ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ಬಲವಂತದ ಮತಾಂತರ ನಡೆಸಲಾಗುತ್ತಿದೆ ಎನ್ನುವ ರಾಜಕೀಯ ಪ್ರೇರಿತ ಆರೋಪಗಳನ್ನು ಮಾಡಿ ಚರ್ಚ್ ನೊಳಗೆ ನುಗ್ಗಿದ ಘಟನೆ ಹುಬ್ಬಳ್ಳಿಯ ಭೈರಿದೇವಕೊಪ್ಪದ ಆಲ್ ಅಸೆಂಬ್ಲಿ ಆಫ್ ಗಾಡ್ ಚರ್ಚ್ ನಲ್ಲಿ ಭಾನುವಾರ ನಡೆದಿದೆ.


Provided by

ಹಿಂದೂಗಳನ್ನು ಪ್ರಾರ್ಥನೆ ಹೆಸರಿನಲ್ಲಿ ಮತಾಂತರ ಮಾಡಿಸಲಾಗುತ್ತಿದೆ ಎಂದು ಆರೋಪಿಸಿದ ಬಿಜೆಪಿ ಪರಿವಾರದ ಕಾರ್ಯಕರ್ತರು ಚರ್ಚ್ ನೊಳಗೆ ಅಕ್ರಮವಾಗಿ ಪ್ರವೇಶಿಸಿರುವುದೇ ಅಲ್ಲದೇ ಭಜನೆ ಮಾಡುವ ಮೂಲಕ ವಿವಾದ ಸೃಷ್ಟಿಸಲು ಮುಂದಾಗಿದ್ದಾರೆ ಎನ್ನುವ ಆರೋಪಗಳು ಕೇಳಿ ಬಂದಿವೆ.

ಪಾದ್ರಿಯ ಜೊತೆಗೆ ಜಗಳಕ್ಕೆ ನಿಂತ ಬಿಜೆಪಿ ಪರಿವಾರ(BJP Parivar)ದ ಕಾರ್ಯಕರ್ತರು ಘರ್ಷಣೆಯ ವಾತಾವರಣವನ್ನು ಸೃಷ್ಟಿಸಿ, ಭೀತಿ ಸೃಷ್ಟಿರುವ ಘಟನೆಯೂ ನಡೆದಿದೆ. ಈ ಮೂಲಕ ರಾಜ್ಯದಲ್ಲಿ ಧಾರ್ಮಿಕ ಸ್ವಾತಂತ್ರ್ಯಕ್ಕೆ ಸಂಪೂರ್ಣವಾದ ಧಕ್ಕೆಯನ್ನು ತರಲಾಗಿದ್ದು, ಇದು ರಾಜ್ಯ ಸರ್ಕಾರ ಪ್ರಾಯೋಜಿತ ಘಟನೆ ಎಂದು ಸಾರ್ವಜನಿಕ ವಲಯದಲ್ಲಿ ಅಭಿಪ್ರಾಯ ಕೇಳಿ ಬಂದಿದೆ.

ರಾಜ್ಯದಲ್ಲಿ ಬಸವರಾಜ್ ಬೊಮ್ಮಾಯಿ(Basavaraj Bommai)ಅವರು ಅಧಿಕಾರ ಹಿಡಿದ ಬಳಿಕ, ರಾಜ್ಯದಲ್ಲಿ ಸರ್ಕಾರ ಅನ್ನೋದು ಇದೆಯಾ? ಎನ್ನುವ ಅನುಮಾನಗಳು ಸೃಷ್ಟಿಯಾಗಿವೆ. ಬೀದಿಯಲ್ಲಿ ತಲ್ವಾರ್ ಹಿಡಿದು ಬಿಜೆಪಿ ಪರಿವಾರದ ಕಾರ್ಯಕರ್ತರು ಕುಣಿಯುವಷ್ಟು ತಲ್ವಾರ್  ಗಳು ರಾಜ್ಯದಲ್ಲಿ ಅಗ್ಗವಾಗಿ ಹೋಗಿದೆ. ಕಾನೂನನ್ನು ಕೈಗೆತ್ತಿಕೊಂಡು ಒಂದೆಡೆ ಅನೈತಿಕ ಪೊಲೀಸ್ ಗಿರಿ ನಡೆಸಲಾಗುತ್ತಿದೆ. ಒಟ್ಟಿನಲ್ಲಿ ಮುಸ್ಲಿಮ್ ಹಾಗೂ ಕ್ರೈಸ್ತ ಸಮುದಾಯದ ಮೇಲೆ ಹಿಂದುತ್ವದ ಹೆಸರಿನಲ್ಲಿ ಬಿಜೆಪಿ ಪರಿವಾರ ದಾಳಿ ನಡೆಸುತ್ತಿದೆ ಎನ್ನುವ ಚರ್ಚೆಗಳು ಇದೀಗ ಸಾರ್ವಜನಿಕ ವಲಯದಲ್ಲಿ ಕೇಳಿ ಬಂದಿದೆ.

ಕಾನೂನು ಕಾಯಬೇಕಿರುವ ಸ್ಥಳದಲ್ಲಿರುವ ಸಿಎಂ ಬೊಮ್ಮಾಯಿ ಆಕ್ಷನ್ ಗೆ ರಿಯಾಕ್ಷನ್ ಇರುತ್ತದೆ ಎನ್ನುವ ಹೇಳಿಕೆ ನೀಡಿದ ಬಳಿಕ ಬಿಜೆಪಿ ಪರಿವಾರದ ಇಂತಹ ಕೃತ್ಯಗಳು ಹೆಚ್ಚಾಗಿವೆ. ಕಾನೂನು ಸುವ್ಯವಸ್ಥೆ ರಾಜ್ಯದಲ್ಲಿ ಹದಗೆಟ್ಟಿದೆ. ಇಂತಹ ಘಟನೆಗಳ ವಿರುದ್ಧ ಕ್ರಮಕೈಗೊಳ್ಳಬೇಕಾದ ಬೊಮ್ಮಾಯಿ ಸರ್ಕಾರ ಮೌನವಾಗಿ,  ರಾಜಕೀಯ ಲಾಭದ ಲೆಕ್ಕಾಚಾರದಲ್ಲಿ ತೊಡಗಿದೆಯೇ? ಎನ್ನುವ ಪ್ರಶ್ನೆಗಳು ಕೇಳಿ ಬಂದಿವೆ.

ಮಹಾನಾಯಕ(Mahanayaka) ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DvHWsFS1hwLKfIX9njyNyb

ಇನ್ನಷ್ಟು ಸುದ್ದಿಗಳು…

ಎಳೆನೀರು ಸೇವನೆಯಿಂದ ನಮ್ಮ ದೇಹಕ್ಕೆ ಆಗುವ ಅದ್ಬುತ ಪ್ರಯೋಜನಗಳು

ಮಹಿಳೆಯೊಂದಿಗಿನ ತನ್ನ ಖಾಸಗಿ ಚಿತ್ರವನ್ನು ವಾಟ್ಸಾಪ್ ಗ್ರೂಪ್ ಗೆ ಶೇರ್ ಮಾಡಿದ ಶಿಕ್ಷಕ!

KSRTCಯಲ್ಲಿ ಕೆಲಸದ ಆಫರ್ ನೀಡಿ 500 ಮಂದಿಯನ್ನು ವಂಚಿಸಿದ ಇಬ್ಬರು ಅರೆಸ್ಟ್

ನಡು ಬೀದಿಯಲ್ಲಿ ತಲ್ವಾರ್ ಝಳಪಿಸುತ್ತಾ ಡಿಜೆಗೆ ಸ್ಟೆಪ್ ಹಾಕಿದ ಹಿಂದುತ್ವ ಕಾರ್ಯಕರ್ತರು!

ಉಗ್ರಪ್ಪಗೆ ರಕ್ಷಣೆ ಸಲೀಂ ಅವರ ಉಚ್ಛಾಟನೆ: “ಸಿದ್ದಹಸ್ತʼ ಶೂರನ ನಿಜಬಣ್ಣ ಬಯಲು” | ಕುಮಾರಸ್ವಾಮಿ ಕಿಡಿ

ಕದ್ರಿ ಐತಿಹಾಸಿಕ ಬೌದ್ಧ ಸ್ಥಳ ವೀಕ್ಷಣೆ: 54 ಬೌದ್ಧ ಬಿಕ್ಕುಗಳ ಕರಾವಳಿ ಪ್ರವಾಸ

ತ್ರಿಶೂಲ ದೀಕ್ಷೆ ನೀಡಿದ್ದೇವೆಯೇ ಹೊರತು ಬಾಂಬ್, ಗ್ರೆನೈಡ್ ಕೊಟ್ಟಿದ್ದಲ್ಲ | ಶರಣ್ ಪಂಪ್ ವೆಲ್

ಇತ್ತೀಚಿನ ಸುದ್ದಿ