ರೈತರಿಂದ ಡಿಸಿ ಕಚೇರಿ ಎದುರು ಧರಣಿ, ಸಿಎಂಗೆ ಕಪ್ಪು ಬಾವುಟ ಪ್ರದರ್ಶನದ ಎಚ್ಚರಿಕೆ

kaveri 1
22/09/2023

ಚಾಮರಾಜನಗರ: ಕಾವೇರಿ ನೀರನ್ನು ತಮಿಳುನಾಡುಗೆ ಹರಿಸುತ್ತಿರುವುದನ್ನು ಖಂಡಿಸಿ ಚಾಮರಾಜನಗರದಲ್ಲಿ ಸರಣಿ ಪ್ರತಿಭಟನೆಗಳು ನಡೆಯುತ್ತಿದ್ದು ರಾಜ್ಯ ರೈತ ಸಂಘದ ಕಾರ್ಯಕರ್ತರು ಡಿಸಿ ಕಚೇರಿ ಎದುರು ಧರಣಿ ನಡೆಸಿ ಆಕ್ರೋಶ ಹೊರಹಾಕಿದರು.

ಚಾಮರಾಜನಗರದ ಚಾಮರಾಜೇಶ್ವರ ದೇಗುಲ ಮುಂಭಾಗದಿಂದ ಹೊನ್ನೂರು ಬಸವಣ್ಣ ನೇತೃತ್ವದಲ್ಲಿ ಪ್ರತಿಭಟನಾ ಮೆರವಣಿಗೆ ಹೊರಟು ರಾಷ್ಟ್ರೀಯ ಹೆದ್ದಾರಿ ಹಾದುಹೋಗುವ ಭುವನೇಶ್ವರಿ ವೃತ್ತದಲ್ಲಿ ರಸ್ತೆ ತಡೆ ನಡೆಸಿ ಆಕ್ರೋಶ ಹೊರಹಾಕಿದರು.

ಬಳಿಕ, ಡಿಸಿ ಕಚೇರಿ ತನಕ ಪ್ರತಿಭಟನಾ ಮೆರವಣಿಗೆ ನಡೆಸಿದ ರೈತರು ರಾಜ್ಯ, ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು.

ರಾಜ್ಯದ ರೈತರ ಹಿತವನ್ನು ಬಲಿ ಕೊಟ್ಟು ರಾತ್ರೋರಾತ್ರಿ ನೀರನ್ನು ಬಿಡಲಾಗುತ್ತಿದೆ. ಕೂಡಲೇ, ನೀರು ನಿಲ್ಲಿಸದಿದ್ದರೇ 27 ರಂದು ಚಾಮರಾಜನಗರಕ್ಕೆ ಸಿಎಂ ಬಂದ ವೇಳೆ ಕಪ್ಪು ಬಾವುಟ ಪ್ರದರ್ಶನ ಮಾಡುತ್ತೇವೆ ಎಂದು ಎಚ್ಚರಿಸಿದರು.

ಇತ್ತೀಚಿನ ಸುದ್ದಿ

Exit mobile version