ಧೋನಿ, ಕೊಹ್ಲಿ, ರೋಹಿತ್ ಶರ್ಮಾ ಪುತ್ರಿಯರ ಬಗ್ಗೆ ಆಕ್ಷೇಪಾರ್ಹ ಕಾಮೆಂಟ್: ಎಫ್ ಐಆರ್ ದಾಖಲು

fir
16/01/2023

ನವದೆಹಲಿ: ಕ್ರಿಕೆಟಿಗರಾದ ಎಂಎಸ್ ಧೋನಿ, ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಅವರ ಪುತ್ರಿಯರ ಮೇಲೆ ಸಾಮಾಜಿಕ ಮಾಧ್ಯಮಗಳಲ್ಲಿ ಆಕ್ಷೇಪಾರ್ಹ ಕಾಮೆಂಟ್ ಗಳ ಬಗ್ಗೆ ಕ್ರಮಕ್ಕೆ ದೆಹಲಿ ಮಹಿಳಾ ಆಯೋಗದ ಮುಖ್ಯಸ್ಥೆ ಸ್ವಾತಿ ಮಲಿವಾಲ್ ಅವರು ದೆಹಲಿ ಪೊಲೀಸರಿಗೆ ನೋಟಿಸ್ ಕಳುಹಿಸಿದ್ದಾರೆ.

ನೋಟಿಸ್ ದೊರಕಿದ ತಕ್ಷಣವೇ ದೆಹಲಿ ಪೊಲೀಸ್  ಇಂಟೆಲಿಜೆನ್ಸ್ ಫ್ಯೂಷನ್ ಮತ್ತು ಸ್ಟ್ರಾಟೆಜಿಕ್ ಆಪರೇಷನ್ಸ್ (ಐಎಫ್ ಎಸ್ ಒ) ಘಟಕವು ಎಫ್ ಐಆರ್ ದಾಖಲಿಸಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಸ್ವಾತಿ ಮಲಿವಾಲ್, ನನ್ನ ಸೂಚನೆಯ ನಂತರ, ದೆಹಲಿ ಪೊಲೀಸರು ವಿರಾಟ್ ಕೊಹ್ಲಿ ಮತ್ತು ಎಂ.ಎಸ್.ಧೋನಿ ಅವರ ಪುತ್ರಿಯರ ಮೇಲೆ ಆಕ್ಷೇಪಾರ್ಹ ಕಾಮೆಂಟ್ ಗಳನ್ನು ಮಾಡಿದ ಪ್ರಕರಣದಲ್ಲಿ ಎಫ್ ಐಆರ್ ದಾಖಲಿಸಿದ್ದಾರೆ. ಶೀಘ್ರದಲ್ಲೇ ಎಲ್ಲಾ ಅಪರಾಧಿಗಳನ್ನು ಬಂಧಿಸಲಾಗುವುದು ಎಂದಿದ್ದಾರೆ.

ಡಿಸಿಡಬ್ಲ್ಯು ಮುಖ್ಯಸ್ಥೆ ಸ್ವಾತಿ ಮಲಿವಾಲ್ ಟ್ವೀಟ್ ಮಾಡಿದ್ದು, ‘ನನ್ನ ಸೂಚನೆಯ ನಂತರ, ದೆಹಲಿ ಪೊಲೀಸರು ವಿರಾಟ್ ಕೊಹ್ಲಿ ಮತ್ತು ಎಂಎಸ್ ಧೋನಿ ಅವರ ಪುತ್ರಿಯರ ಮೇಲೆ ಆಕ್ಷೇಪಾರ್ಹ ಕಮೆಂಟ್ಗಳನ್ನು ಮಾಡಿದ ಪ್ರಕರಣದಲ್ಲಿ ಎಫ್ಐಆರ್ ದಾಖಲಿಸಿದ್ದಾರೆ. ಶೀಘ್ರದಲ್ಲೇ ಎಲ್ಲಾ ಅಪರಾಧಿಗಳನ್ನು ಬಂಧಿಸಲಾಗುವುದು ಮತ್ತು ಕಂಬಿಗಳ ಹಿಂದೆ ಕಳುಹಿಸಲಾಗುವುದು’ ಎಂದಿದ್ದಾರೆ. ಈ ಸಂಬಂಧ ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LG00SlXNdBFJ1LFb3E40gL

ಯೂಟ್ಯೂಬ್ ಚಾನೆಲ್ ಸಬ್ಸ್ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

 

ಇತ್ತೀಚಿನ ಸುದ್ದಿ

Exit mobile version