Dhootha: Sameer MDಗೆ ನೀಡಿದ್ದ ನೋಟಿಸ್ ಗೆ ಹೈಕೋರ್ಟ್ ತಡೆ

ಬೆಂಗಳೂರು: ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಯೂಟ್ಯೂಬ್ ನಲ್ಲಿ ವಿಡಿಯೋ ಮಾಡಿದ್ದ ಸಮೀರ್ ಗೆ ಪೊಲೀಸರು ನೋಟಿಸ್ ನೀಡಿದ್ದರು. ಈ ನೋಟಿಸ್ ಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.
ಎಫ್ ಐಆರ್ ಪ್ರತಿ ನೀಡದೆಯೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಲಾಗಿತ್ತು. ಈ ನೋಟಿಸ್ ಪ್ರಶ್ನಿಸಿ ಸಮೀರ್ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದು, ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ನೋಟಿಸ್ ಗೆ ತಡೆಯಾಜ್ಞೆ ನೀಡಿ ವಿಚಾರಣೆ ಮುಂದೂಡಿದೆ.
ಈ ವಿಡಿಯೋದಲ್ಲಿ ಯಾವುದೇ ಧಾರ್ಮಿಕ ಭಾವನೆಗೆ ಧಕ್ಕೆಯಾಗುವ ಮಾತುಗಳನ್ನಾಡಿಲ್ಲ, ಆದರೂ ಎಫ್ ಐಆರ್ ಪ್ರತಿ ಇಲ್ಲದೇ ಕಚೇರಿಗೆ ತೆರಳಿ ವಿಚಾರಣೆಗೆ ಹಾಜರಾಗಲು ಸೂಚನೆ ನೀಡಿದ್ದಾರೆ ಎಂದು ನ್ಯಾಯ ಪೀಠಕ್ಕೆ ಅರ್ಜಿದಾರರ ಪರ ವಕೀಲರು ವಿವರಿಸಿದರು.
ದೂರು ಯಾರು ನೀಡಿದ್ದಾರೆ ಎಂಬುವುದು ಗೊತ್ತಿಲ್ಲ, ಆದರೂ ನೋಟಿಸ್ ನೀಡುವುದಕ್ಕೆ ಹೇಗೆ ಸಾಧ್ಯ ಎಂದು ಕೋರ್ಟ್ ಪ್ರಶ್ನಿಸಿತು.
ವಿದ್ಯಾರ್ಥಿನಿ ಸೌಜನ್ಯಳ ಸಾಮೂಹಿಕ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಬಗ್ಗೆ ಎಂ.ಡಿ.ಸಮೀರ್ ತಮ್ಮ Dhootha: Sameer MD ಯೂಟ್ಯೂಬ್ ಚಾನೆಲ್ ನಲ್ಲಿ ಪೋಸ್ಟ್ ಮಾಡಿದ್ದರು. ಈ ವಿಡಿಯೋ ಕೋಟ್ಯಂತರ ಜನರನ್ನು ತಲುಪಿದ್ದು, ಭಾರೀ ಸಂಚಲನ ಸೃಷ್ಟಿಸಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: