ಧೃವನಾರಾಯಣ್ ಅವರ ನಿಧನ ಆಘಾತ ತಂದಿದೆ, ನಂಬಲಾಗುತ್ತಿಲ್ಲ: ಸಿಎಂ ಬೊಮ್ಮಾಯಿ ಕಂಬನಿ - Mahanayaka

ಧೃವನಾರಾಯಣ್ ಅವರ ನಿಧನ ಆಘಾತ ತಂದಿದೆ, ನಂಬಲಾಗುತ್ತಿಲ್ಲ: ಸಿಎಂ ಬೊಮ್ಮಾಯಿ ಕಂಬನಿ

dhruvanarayan
11/03/2023

ಬೆಂಗಳೂರು:  ಮಾಜಿ ಸಂಸದ ಧೃವನಾರಾಯಣ್ ಅವರ  ಅಂತ್ಯಕ್ರಿಯೆಯನ್ನು  ಸಕಲ ಸರ್ಕಾರಿ ಗೌರವದೊಂದಿದೆ  ನೆರವೇರಿಸಲು ತೀರ್ಮಾನಿಸಲಾಗಿದೆ  ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಧೃವ ನಾರಾಯಣ್ ಅವರು ನನ್ನ ಆತ್ಮೀಯ ಸ್ನೇಹಿತರಾಗಿದ್ದರು. ವಿರೋಧ ಪಕ್ಷದಲ್ಲಿದ್ದರೂ ಕೂಡ ರಾಜ್ಯದ ಅಭಿವೃದ್ಧಿಯಲ್ಲಿ ಸಾಕಷ್ಟು ಬಾರಿ ಮುಕ್ತವಾಗಿ ಚರ್ಚೆ ಮಾಡಿದ್ದೆವು. ಅವರ ಚಿಂತನೆ ಮತ್ತು ನಮ್ಮ ಚಿಂತನೆಯಲ್ಲಿ ಸಾಮ್ಯವಿತ್ತು. ಶಾಸಕರಾಗಿ ಹಾಗೂ ಸಂಸದರಾಗಿದ್ದ ಅವರು ಈ ರಾಜ್ಯದ ಅಭಿವೃದ್ಧಿ, ಪರಿಶಿಷ್ಟ ಜನಾಂಗದ ಬಗ್ಗೆ ಹಾಗೂ ಚಾಮರಾಜನಗರದ ಬಗ್ಗೆ ಶ್ರೇಷ್ಠ ಕಳಕಳಿ ವ್ಯಕ್ತಪಡಿಸುತ್ತಿದ್ದರು. ಒಳ್ಳೆ ಕೆಲಸ ಮಾಡಿದ್ದರು. ಅವರಿಗೆ ಹೃದಯಾಘಾತವಾಗಿ ಸಾವು ಉಂಟಾಗಿದ್ದು ಆಘಾತ ತಂದಿದೆ. ನಂಬಲಾಗುತ್ತಿಲ್ಲ. ಅತಿ ಕ್ರಿಯಾಶೀಲರಾಗಿ ಓಡಾಡುತ್ತಿದ್ದರು ಎಂದರು.

ಬದ್ಧತೆಯುಳ್ಳ ರಾಜಕಾರಣಿ:


Provided by

ಸಂಸತ್ತಿನಲ್ಲಿ ಅವರು ಪರಿಣಾಮಕಾರಿಯಾಗಿ ಮಾತನಾಡುತ್ತಿದ್ದರು. ಪರಿಶಿಷ್ಟ  ಜನಾಂಗ, ರಾಜ್ಯದ ಬಗ್ಗೆ ಮಾತನಾಡಿದ್ದಾರೆ. ಬದ್ಧತೆಯುಳ್ಳ ರಾಜಕಾರಣಿಯನ್ನು ಕಳೆದುಕೊಂಡಿದ್ದೇವೆ. ತುಂಬಲಾರದ ನಷ್ಟವಾಗಿದೆ.  ಅವರ ಆತ್ಮಕ್ಕೆ ಭಗವಂತ ಶಾಂತಿ ನೀಡಲಿ. ಅವರ ಕುಟುಂಬಕ್ಕೆ ಹಾಗೂ ಅಭಿಮಾನಿಗಳಿಗೆ  ದುಃಖ ಭರಿಸುವ ಶಕ್ತಿ ನೀಡಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುವುದಾಗಿ  ಮುಖ್ಯಮಂತ್ರಿಗಳು ತಿಳಿಸಿದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ