ಸರ್ಕಾರಿ ಆಸ್ಪತ್ರೆಗಳಲ್ಲಿ ಮಹಿಳಾ ವೈದ್ಯರಿಗೆ ರಾತ್ರಿ ಪಾಳಿ ಬೇಡ ಎಂದ ದೀದಿ: ಪ್ರಧಾನಿ ಆಪ್ತ ನ್ಯಾಯಮೂರ್ತಿ ಚಂದ್ರಚೂಡ್ ಗರಂ
ಸರ್ಕಾರಿ ಆಸ್ಪತ್ರೆಗಳಲ್ಲಿ ಮಹಿಳಾ ವೈದ್ಯರಿಗೆ ರಾತ್ರಿ ಪಾಳಿ ನೀಡುವುದನ್ನು ನಿಲ್ಲಿಸುವ ಪಶ್ಚಿಮ ಬಂಗಾಳ ಸರ್ಕಾರದ ಅಧಿಸೂಚನೆಯನ್ನು ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಟೀಕಿಸಿದ್ದಾರೆ. ರಾತ್ರಿ ಪಾಳಿಯಲ್ಲಿ ಕಾರ್ಯನಿರ್ವಹಿಸುವ ಮಹಿಳಾ ವೈದ್ಯರಿಗೆ ಭದ್ರತೆ ಒದಗಿಸುವುದು ರಾಜ್ಯ ಸರ್ಕಾರದ ಕರ್ತವ್ಯ ಎಂದು ಛಾಟಿ ಬೀಸಿದ್ದಾರೆ.
ಕೋಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಟ್ರೈನಿ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಆದ ಬಳಿಕ ಹೊರಡಿಸಲಾಗಿದ್ದ ಅಧಿಸೂಚನೆಯನ್ನು ತಿದ್ದುಪಡಿ ಮಾಡಲು ಬಂಗಾಳ ಸರ್ಕಾರಕ್ಕೆ ಸುಪ್ರೀಂಕೋರ್ಟ್ ನಿರ್ದೇಶಿಸಿದೆ.
ಮಹಿಳೆಯರು ರಾತ್ರಿ ಪಾಳಿಯಲ್ಲಿ ಕೆಲಸ ಮಾಡಲು ಸಾಧ್ಯವಿಲ್ಲ ಎಂದು ನೀವು ಹೇಗೆ ಹೇಳುತ್ತೀರಿ? ಅವರು ರಿಯಾಯಿತಿಯನ್ನು ಬಯಸುವುದಿಲ್ಲ. ಅದಕ್ಕೆ ಪರಿಹಾರವೆಂದರೆ, ನೀವು ಭದ್ರತೆಯನ್ನು ನೀಡಬೇಕು.
ಪಶ್ಚಿಮ ಬಂಗಾಳ ಅಧಿಸೂಚನೆಯನ್ನು ಸರಿಪಡಿಸಬೇಕು.ಮಹಿಳೆಯರು ಪೈಲಟ್‍ಗಳಾಗಿ, ಸೇನೆಯಲ್ಲಿ ರಾತ್ರಿ ಕೆಲಸ ಮಾಡುತ್ತಾರೆ ಎಂಬುದನ್ನು ನೀವು ಗಮನಿಸಬೇಕು ಎಂದು ಸರ್ಕಾರದ ಪರ ವಾದ ಮಂಡಿಸಿದ ವಕೀಲ ಸಿಬಲ್ ಅವರಿಗೆ ಸಿಜೆಐ ಸೂಚಿಸಿದರು.
ಕೋಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ನಡೆದ ವೈದ್ಯೆಯ ಅತ್ಯಾಚಾರ ಮತ್ತು ಹತ್ಯೆಗೆ ಸಂಬಂಧಿಸಿದಂತೆ ಪೀಠವು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸುತ್ತಿದೆ. ಪ್ರಸ್ತುತ ಕೇಂದ್ರೀಯ ತನಿಖಾ ದಳ ಪ್ರಕರಣದ ತನಿಖೆ ನಡೆಸುತ್ತಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth