ನೇತ್ರಾವತಿ ಪೀಕ್ ಗೆ ಆಗಮಿಸಿದ್ದ ಪ್ರವಾಸಿಗರಿಗೆ ನಿರಾಸೆ: ಅರಣ್ಯ ಇಲಾಖೆ ಸಿಬ್ಬಂದಿ ಜೊತೆ ವಾಗ್ವಾದ

ಚಿಕ್ಕಮಗಳೂರು: ಕುದುರೆಮುಖ ರಾಷ್ಟ್ರೀಯ ಉದ್ಯಾನವನದಲ್ಲಿರುವ ನೇತ್ರಾವತಿ ಪೀಕ್ ಆಗಮಿಸಿದ ಪ್ರವಾಸಿಗರಿಗೆ ನಿರಾಸೆಯುಂಟಾಗಿದ್ದು, ಮುಂಗಡ ಬುಕ್ಕಿಂಗ್ ಮಾಡಿದ್ರು ಚಾರಣಕ್ಕೆ ಆವಕಾಶ ನೀಡದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಗಳ ಜೊತೆ ಪ್ರವಾಸಿಗರು ವಾಗ್ವಾದ ನಡೆಸಿದ್ದಾರೆ.
ಅರಣ್ಯ ಇಲಾಖೆ ದಿನಕ್ಕೆ 300 ಮಂದಿಗಷ್ಟೆ ಚಾರಣಕ್ಕೆ ಅವಕಾಶ ನೀಡಿದೆ. ದಿನಕ್ಕೆ ಮುನ್ನೂರು ಜನರಿಗೆ ಮಾತ್ರ ಅವಕಾಶದ ನಿಯಮದಿಂದಾಗಿ ಚಾರಣ ಮಾಡುವವರಿಗೆ ಅವಕಾಶ ಸಿಗುತ್ತಿಲ್ಲ. ಇದರ ವಿರುದ್ಧ ಪ್ರವಾಸಿಗರು ತೀವ್ರ ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆಯಿತು.
ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಕುದುರೆಮುಖ ರಾಷ್ಟ್ರೀಯ ಉದ್ಯಾನವನದಲ್ಲಿರುವ ನೇತ್ರಾವತಿ ಪೀಕ್ ಗೆ ಆಗಮಿಸಿದ್ದ ಪ್ರವಾಸಿಗರು ನಿರಾಸೆಯಿಂದ ಹಿಂದಿರುಗಿ ಹೋಗುವಂತಾಯಿತು.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw