ಭಾರೀ ಸದ್ದು ಮಾಡಿದ್ದ ಮಾದಕ ದ್ರವ್ಯ ಜಾಲ: ವೈದ್ಯಕೀಯ ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ
ಮಂಗಳೂರು ನಗರದಲ್ಲಿ ಇತ್ತೀಚಿಗೆ ಭಾರೀ ಸುದ್ದಿ ಮಾಡಿದ್ದ ಮಾದಕ ದ್ರವ್ಯ ಜಾಲ ಪ್ರಕರಣಗಳಲ್ಲಿ ಸಿಲುಕಿದ್ದ ಇಬ್ಬರು ವೈದ್ಯರ ವಿರುದ್ಧ ಖಾಸಗಿ ವೈದ್ಯಕೀಯ ಕಾಲೇಜಿನ ಆಡಳಿತ ಮಂಡಳಿಯು ಶಿಸ್ತು ಕ್ರಮ ತೆಗೆದುಕೊಂಡಿದೆ. ಅಲ್ಲದೇ 7 ಮಂದಿ ವಿದ್ಯಾರ್ಥಿಗಳನ್ನು ಅಮಾನತು ಮಾಡಲಾಗಿದೆ.
ಈ ಕೇಸನ್ನು ವೈದ್ಯಕೀಯ ಕಾಲೇಜಿನ ಆಡಳಿತ ಮಂಡಳಿಯು ಗಂಭೀರವಾಗಿ ಪರಿಗಣಿಸಿದ್ದು ಆಡಳಿತ ಮಂಡಳಿಯ ಮುಖ್ಯಸ್ಥರು ಶುಕ್ರವಾರ ಮಂಗಳೂರು ನಗರದ ಪೊಲೀಸ್ ಕಮಿಷನರ್ ಜೊತೆ ಈ ಕುರಿತು ಮಾತುಕತೆ ನಡೆಸಿದ್ದಾರೆ.
ಇದೇ ವೇಳೆ ಆರೋಪಿತ ವೈದ್ಯರು, ವಿದ್ಯಾರ್ಥಿಗಳ ವಿರುದ್ಧ ಕ್ರಮಕೈಗೊಂಡ ಬಗ್ಗೆ ಮಾಹಿತಿ ನೀಡಿದ್ದಾರೆ. ಈ ಕುರಿತು ತನಿಖೆ ನಡೆಯುತ್ತಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LG00SlXNdBFJ1LFb3E40gL
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw