‘ಅನರ್ಹತೆ’ ನನಗೆ ಸೇವೆ ಮಾಡಲು ದೊಡ್ಡ ಅವಕಾಶ ನೀಡಿದೆ: ರಾಹುಲ್ ಗಾಂಧಿ
2004 ರ ಮಾರ್ಚ್ ನಲ್ಲಿ ಸಕ್ರಿಯ ರಾಜಕೀಯಕ್ಕೆ ಕಾಲಿಟ್ಟಾಗ ನಾನು ಲೋಕಸಭೆಯಿಂದ ಅನರ್ಹಗೊಳ್ಳುತ್ತೇನೆ ಎಂದು ಭಾವಿಸಿರಲಿಲ್ಲ. ಆದರೆ ಈ ಅನರ್ಹತೆ ನನಗೆ ಜನರ ಸೇವೆ ಮಾಡಲು ‘ದೊಡ್ಡ ಅವಕಾಶ’ ನೀಡಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.
ಅವರು ಕ್ಯಾಲಿಫೋರ್ನಿಯಾದ ಪ್ರತಿಷ್ಠಿತ ಸ್ಟ್ಯಾನ್‌ಫೋರ್ಡ್ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ಭಾರತೀಯ ವಿದ್ಯಾರ್ಥಿಗಳ ಸರಣಿ ಪ್ರಶ್ನೆಗಳಿಗೆ ಉತ್ತರವಾಗಿ ಈ ಹೇಳಿಕೆ ನೀಡಿದ್ದಾರೆ.
ಅಮೆರಿಕದ ಮೂರು ನಗರಗಳ ಪ್ರವಾಸದಲ್ಲಿರುವ ರಾಹುಲ್ ಗಾಂಧಿ, ಕ್ಯಾಲಿಫೋರ್ನಿಯಾದ ಪ್ರತಿಷ್ಠಿತ ಸ್ಟ್ಯಾನ್‌ಫೋರ್ಡ್ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ಭಾರತೀಯ ವಿದ್ಯಾರ್ಥಿಗಳ ಅನರ್ಹತೆಯ ಹಿನ್ನೆಲೆಯ ಸರಣಿ ಪ್ರಶ್ನೆಗಳಿಗೆ ಉತ್ತರವಾಗಿ ‘ಆರು ತಿಂಗಳ ಹಿಂದೆ ನಿಜವಾದ ನಾಟಕ ಆರಂಭವಾಯಿತು ಎಂದು ನಾನು ಭಾವಿಸುತ್ತೇನೆ. ಭಾರತದಲ್ಲಿನ ಇಡೀ ವಿರೋಧ ಪಕ್ಷ ಕಷ್ಟಪಡುತ್ತಿತ್ತು. ಪ್ರಭುತ್ವದ ವಿರುದ್ಧ ಹೋರಾಡಲು ಹೆಣಗಾಡುತ್ತಿತ್ತು. ಯಾಕೆಂದರೆ ಭಾರಿ ಆರ್ಥಿಕ ಪ್ರಾಬಲ್ಯ. ಸಂವಿಧಾನಿಕ ಸಂಸ್ಥೆಗಳ ವಶವಾಗಿದ್ದು ನಮ್ಮ ದೇಶದಲ್ಲಿ ಪ್ರಜಾಸತ್ತಾತ್ಮಕ ಹೋರಾಟ ಮಾಡಲು ನಾವು ಹೆಣಗಾಡುತ್ತಿದ್ದೇವೆ. ಇದೇ ಸಮಯದಲ್ಲಿ ನಾನು ‘ಭಾರತ್ ಜೋಡೋ ಯಾತ್ರೆ’ ಮಾಡಲು ನಿರ್ಧರಿಸಿದೆ’ ಎಂದು ಹೇಳಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw