“ಸರ್ಕಾರಿ ಶಾಲೆಯಲ್ಲಿ ಕಲಿತ ಮಕ್ಕಳಿಗೆ ಬದುಕಿನ ಭರವಸೆಗಳು ಹೆಚ್ಚು”
ಹೊಸಕೋಟೆ : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ (RSETI) ಸಂಸ್ಥೆ ಸೊಣ್ಣಹಳ್ಳಿಪುರ ಹಾಗೂ ಕಂಬಳಿಪುರ ಕೆನರಾ ಬ್ಯಾಂಕ್ ಶಾಖೆಯ ಸಹಯೋಗದೊಂದಿಗೆ ಹಮ್ಮಿಕೊಂಡಿದ್ದ “ಶಾಲಾ ಮಕ್ಕಳಿಗೆ ಉಚಿತ ಸಮವಸ್ತ್ರ ಹಾಗೂ ಶಾಲಾ ಬ್ಯಾಗನ್ನು ವಿತರಿಸುವ” ಕಾರ್ಯಕ್ರಮವನ್ನು ಸಂಸ್ಥೆಯಲ್ಲಿ ಹಮ್ಮಿಕೊಳ್ಳಲಾಗಿತ್ತು.
ಸಭೆಗೆ ಆಗಮಿಸಿದ್ದ ದೇವನಹಳ್ಳಿ ಕೆನರಾ ಬ್ಯಾಂಕ್ ವಲಯ ಕಛೇರಿಯ ಸಹಾಯಕ ಮಹಾ ಪ್ರಬಂಧಕರಾದ ಹರೀಶ್ ಎಂ. ವಿದ್ಯಾರ್ಥಿಗಳನ್ನು ಕುರಿತು ವಿದ್ಯಾಭ್ಯಾಸದಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕು. ಸರ್ಕಾರಿ ಶಾಲೆಯಲ್ಲಿ ಓದಿದ ಮಾತ್ರಕ್ಕೆ ಯಾರು ದಡ್ದರಲ್ಲಾ ! ನಾವೆಲ್ಲರೂ ಸರ್ಕಾರಿ ಶಾಲೆಗಳಲ್ಲೇ ವಿದ್ಯಾಭ್ಯಾಸ ಮಾಡಿ ಬ್ಯಾಂಕ್ ಅಧಿಕಾರಿಗಳಾಗಿರುವುದು ಎಂದು ಸಂತಸ ವ್ಯಕ್ತಪಡಿಸಿದರು. ಪ್ರತೀ ವರ್ಷ ಸರ್ಕಾರಿ ಶಾಲೆಗಳಲ್ಲಿನ ಬಡತನದ ಮಕ್ಕಳಿಗೆ ಕೆನರಾಬ್ಯಾಂಕ್ ವತಿಯಿಂದ ಸಣ್ಣ ಪುಟ್ಟ ಸವಲತ್ತುಗಳನ್ನು ಒದಗಿಸಲು ನಾವು ಸದಾ ಸಿದ್ದರಿದ್ದೇವೆ ಎಂದು ಭರವಸೆಯ ಮಾತುಗಳನ್ನಾಡಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾ ಮಾರ್ಗದರ್ಶಿ ಬ್ಯಾಂಕ್ ವ್ಯವಸ್ಥಾಪಕರಾದ ಕೆ.ಎಂ.ಮಧುಕರ್ ಮಾತನಾಡಿ, ಕೆನರಾ ಬ್ಯಾಂಕ್ ಸಂಸ್ಥೆಯಿಂದ ಉತ್ತಮ ಸೇವೆ ಸಿಗುವುದರ ಜೊತೆಗೆ ಸಾಮಾಜಿಕ ಕಾರ್ಯ ಚಟುವಟಿಕೆಗಳಲ್ಲಿ ನಾವು ತೊಡಗಿಸಿಕೊಳ್ಳಲು ಬ್ಯಾಂಕ್ ನಮಗೆ ಅನುವು ಮಾಡಿಕೊಟ್ಟಿದೆ. ಅದರ ಎಲ್ಲಾ ಸದುಪಯೋಗವನ್ನು ತಾವುಗಳೆಲ್ಲರೂ ಪಡೆದುಕೊಳ್ಳಬೇಕು ಎಂದು ಶುಭಾಶಯಗಳನ್ನು ಕೋರಿದರು.
ಸಂಸ್ಥೆಯ ನಿರ್ದೇಶಕರಾದ ಎಂ.ಗಿರಿಯಪ್ಪ ಮಾತನಾಡಿ, ಶಿಕ್ಷಕರು ಸಮಾಜದ ಉತ್ತಮ ವ್ಯಕ್ತಿಗಳನ್ನು ರೂಪಿಸುವ ರುವಾರಿಗಳು, ಸತ್ಪ್ರಜೆಗಳನ್ನು ಸೃಷ್ಟಿಮಾಡುವ ಜವಾಬ್ದಾರಿ ಇಂದಿನ ಶಿಕ್ಷಕರ ಮೇಲಿದೆ ಎಂದರು. ವಿದ್ಯಾರ್ಥಿಗಳು ಪ್ರಭುದ್ದ ಭಾರತದ ನಿರ್ಮಾಣಕಾರರು, ಸಮಾಜವನ್ನು ಉತ್ತಮ ರೀತಿಯಲ್ಲಿ ಮುನ್ನಡೆಸುವ ಮುಂದಿನ ಜವಾಬ್ದಾರಿ ಇಂದಿನ ವಿದ್ಯಾರ್ಥಿಗಳ ಮೇಲಿದೆ ಎಂದರು.
ಇದೇ ಸಂದರ್ಭದಲ್ಲಿ ಸೊಣ್ಣಹಳ್ಳಿಪುರ ಸರ್ಕಾರಿ ಶಾಲೆಯ ಮುಖ್ಯೋಪಾಧ್ಯಾಯರಾದ ಉಮಾ ಮಾತನಾಡಿ, ಸಂಸ್ಥೆಯು ತರಬೇತಿ ನೀಡುವುದರ ಜೊತೆಗೆ ಸಮಾಜ ಕಾರ್ಯದಲ್ಲಿ ಪ್ರಮುಖ ಪಾತ್ರವನ್ನು ನಿರ್ವಹಿಸುತ್ತಿದೆ. ಇಂತಹ ಕೆನರಾ ಬ್ಯಾಂಕ್ ಸಂಸ್ಥೆ ಬಹಳಷ್ಟು ಎತ್ತರಕ್ಕೆ ಬೆಳೆಯಲಿ ಎಂದು ಆಶಯದ ಮಾತುಗಳನ್ನಾಡಿದರು.
ಕಂಬಳಿಪುರ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕರಾದ ನಟರಾಜ್ ರವರು ಮತ್ತು ಇತರೆ ಸಹ ಶಿಕ್ಷಕರು ಸಂಸ್ಥೆಯ ಸಿಬ್ಬಂದಿ ಹಾಗೂ ಕಂಬಳಿಪುರ ಕೆನರಾ ಬ್ಯಾಂಕ್ ಶಾಖೆಯ ವ್ಯವಸ್ಥಾಪಕರಾದ ನವೀನ್ ಕುಮಾರ್ ಉಪಸ್ಥಿತರಿದ್ದರು.
“ಕೇವಲ ಒಂದು ವಿದ್ಯಾರ್ಥಿ ಶಾಲೆಗೆ ಬಂದರು ಕನ್ನಡ ಶಾಲೆಗಳನ್ನು ಮುಚ್ಚುವಂತಿಲ್ಲ” ಕನ್ನಡ ಕಲಿಯಿರಿ ಸರ್ಕಾರಿ ಶಾಲೆಗಳನ್ನು ಉಳಿಸಿರಿ, ಬೆಳೆಸಿರಿ”
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw