ದರ್ಶನ್ ರನ್ನು ಜೈಲಿನಲ್ಲಿ ನೋಡಿ ಬೇಸರ ಆಯಿತು: ವಿನೋದ್ ರಾಜ್
ಬೆಂಗಳೂರು: ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಅವರನ್ನು ಇಂದು ದಿನಕರ್ ತೂಗುದೀಪ್ ಕುಟುಂಬದ ಜೊತೆಯೇ ತೆರಳಿ ವಿನೋದ್ ರಾಜ್ ಭೇಟಿಯಾದರು.
ದರ್ಶನ್ ಅವರನ್ನು ಭೇಟಿಯಾದ ನಂತರ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ದರ್ಶನ್ ರನ್ನು ಜೈಲಿನಲ್ಲಿ ನೋಡಿ ಬೇಸರ ಆಯಿತು. ನನ್ನ ಮನೋಭಾವನೆಯಲ್ಲಿ ದರ್ಶನ್ ಒಬ್ಬ ಕಲಾವಿದ. ಬಂದ ತಕ್ಷಣ ನನ್ನನ್ನು ನೋಡಿ ತುಂಬಿಕೊಂಡರು. ಅದೇ ಪ್ರೀತಿ ಅದೇ ಆತ್ಮೀಯತೆಯಿಂದ ಮಾತನಾಡಿದರು. ದೇವರ ದಯೆಯಿಂದ ಎಲ್ಲಾ ಸರಿ ಹೋಗಬೇಕು ಎಂದು ಕೇಳಿಕೊಳ್ಳುತ್ತೇನೆ ಎಂದರು.
ದರ್ಶನ್ ನೋಡಿದಾಗ ನೋವಾಯಿತು. ಆದರೆ ಅಲ್ಲಿ ಪ್ರಾಣ ಕಳೆದುಕೊಂಡ ತಂದೆ ತಾಯಿ ನೋವು ದೊಡ್ಡದು. ಆತನ ಹೆಂಡತಿ ಗರ್ಭದಲ್ಲಿರುವ ಮಗು ಎಲ್ಲವನ್ನು ನೆನೆಸಿಕೊಂಡರೆ ತುಂಬಾ ನೋವಾಗುತ್ತದೆ ಎಂದು ಹೇಳಿದರು. ಜೊತೆಗೆ ದರ್ಶನ್ರನ್ನು ನಂಬಿ ತಮ್ಮ ಸಿನಿಮಾಗೆ ಹಣ ಹಾಕಿದ ನಿರ್ಮಾಪಕರನ್ನು ನೋಡಿದರೆ ನೋವಾಗುತ್ತದೆ. ಎಲ್ಲವನ್ನೂ ಕಳೆದುಕೊಂಡು ನೋಡೋದು ಕಷ್ಟದ ಕೆಲಸ ಎಂದು ಅವರು ಹೇಳಿದರು.
ಕಾರಾಗೃಹದಲ್ಲಿ ಅಷ್ಟು ದಿನಗಳ ಕಾಲ ಸಮಯ ಕಳೆಯೋದು ಸುಲಭವಲ್ಲ. ಅಣ್ಣಾ ಎಂದು ಬಾಯಿ ತುಂಬಾ ಹೇಳುವ ದರ್ಶನ್ ಹೀಗೆ ಆಯ್ತಲ್ಲ ನೋವು ಆಗ್ತಿದೆ ಎಂದು ಅವರು ಬೇಸರ ವ್ಯಕ್ತಪಡಿಸಿದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: